ಗುರುಪುರ ಬಂಟರ ಮಾತೃ ಸಂಘದಿಂದ ಸಾಧಕರಿಗೆ ಗೌರವ ಸನ್ಮಾನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಗುರುಪುರ ಬಂಟರ ಮಾತೃ ಸಂಘದಿಂದ ಸಾಧಕರಿಗೆ ಗೌರವ ಸನ್ಮಾನ

Share This
BUNTS NEWS, ಮಂಗಳೂರು: ಗುರುಪುರ ಬಂಟರ ಮಾತೃ ಸಂಘವು ‘ಬಂಟ ಕಲಾವೀಳ್ಯ 2020’ ಅಂತರ್ ಬಂಟರ ಸಂಘಗಳ ಸ್ಪರ್ಧಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿ ಗೌರವಿಸಿತು.
ಸಮಾರಂಭದಲ್ಲಿ ಶಿಕ್ಷಣ ಕ್ಷೇತ್ರದ ಸೇವೆಗಾಗಿ ತಿರುವೈಲಿನ ಜಾಣು ಶೆಟ್ಟಿ ಮೆಮೋರಿಯಲ್ ಎಜ್ಯುಕೇಶನ್ & ಚಾರಿಟೇಬಲ್ ಟ್ರಸ್ಟ್ (ರಿ) ಇದರ ಸ್ಥಾಪಕಾಧ್ಯಕ್ಷ ಸೀತಾರಾಮ ಜಾಣು ಶೆಟ್ಟಿ, ಸಹಕಾರ ಕ್ಷೇತ್ರದ ಸೇವೆಗಾಗಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾl ಎಂ.ಎನ್. ರಾಜೇಂದ್ರ ಕುಮಾರ್, ಬಂಟರ ಸಂಘಗಳ ಸಂಘಟನೆಗಾಗಿ ಪಡುಬಿದ್ರಿ – ಬೆಳಗಾಂ ಬಂಟರ ಸಂಘದ ಮಾಜಿ ಅಧ್ಯಕ್ಷ ಸಾಂತೂರು ಭಾಸ್ಕರ ಶೆಟ್ಟಿ ಹಾಗೂ ರಂಗಭೂಮಿಯ ಸೇವೆಗಾಗಿ ನಟ ಭೋಜರಾಜ್ ವಾಮಂಜೂರು ಅವರನ್ನು ಗೌರವಿಸಿ ಸನ್ಮಾನಿಸಿತು.

ವೇದಿಕೆಯಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಗುರುಪುರ ಬಂಟರ ಮಾತೃ ಸಂಘದ ಅಧ್ಯಕ್ಷ ರಾಜಕುಮಾರ್ ಶೆಟ್ಟಿ ತಿರುವೈಲು ಗುತ್ತು, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಶೆಟ್ಟಿ, ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕಿ ಶಕುಂತಳ ಶೆಟ್ಟಿ, ವಿಜಯಕುಮಾರ್ ಶೆಟ್ಟಿ ಕೊಡಿಯಾಲ್ ಬೈಲ್, ಉಡುಪಿ ಮೋಹನದಾಸ ಶೆಟ್ಟಿ, ಸತೀಶ್ ಶೆಟ್ಟಿ ಕಾರಮೊಗರು ಶೆಟ್ಟಿ, ವಿಶ್ವನಾಥ ಶೆಟ್ಟಿ ಮೂಡುಶೆಡ್ಡೆ, ಬಂಟರ ಮಾತೃ ಸಂಘದ ವಸಂತ ಶೆಟ್ಟಿ, ತುಳುವ ಸಿರಿ ಅದ್ವಿಕಾ ಶೆಟ್ಟಿ, ಕಾವೂರು ಬಂಟರ ಸಂಘದ ಆನಂದ ಶೆಟ್ಟಿ, ಪುಷ್ಪರಾಜ ಶೆಟ್ಇ ಮೊಗರು, ಗುರುಪು ಬಂಟರ ಮಾತೃ ಸಂಘದ ಚಂದ್ರಹಾಸ ಶೆಟ್ಟಿ ನಾರಳ, ಸುಬ್ಬಯ್ಯ ಶೆಟ್ಟಿ ಗುರುಪುರ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಗುರುಪುರ ಬಂಟರ ಮಾತೃ ಸಂಘದ ಸಂಚಾಲಕ ಸುಂದರ್ಶನ್ ಶೆಟ್ಟಿ ಪೆರ್ಮಂಕಿ ಸ್ವಾಗತಿಸಿದರು. ಅಡ್ಯಾರ್ ಪುರುಷೋತ್ತಮ ಭಂಡಾರಿ ನಿರೂಪಿಸಿದರು.

Pages