ವಿಶ್ವಕ್ಕೆ ಮಾರಿಯಾದ ಕೊರೊನಾದ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕಿದೆ: ಡಾ. ವೈ ಭರತ್ ಶೆಟ್ಟಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ವಿಶ್ವಕ್ಕೆ ಮಾರಿಯಾದ ಕೊರೊನಾದ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕಿದೆ: ಡಾ. ವೈ ಭರತ್ ಶೆಟ್ಟಿ

Share This

ಸುರತ್ಕಲ್ ಬಂಟರ ಸಂಘದ ವತಿಯಿಂದ ಆಹಾರದ ಕಿಟ್ ವಿತರಣೆ

ಬಂಟ್ಸ್ ನ್ಯೂಸ್, ಸುರತ್ಕಲ್: ಸರ್ಕಾರ ಹಾಗೂ ಸಮಾಜ ಒಟ್ಟಾಗಿ ಮಾರಕ ರೋಗ ಕೊರಾನದ ವಿರುದ್ಧ ಹೋರಾಡಬೇಕಾಗಿದೆ. ಸರ್ಕಾರ ಮತ್ತು ಸಂಘ ಸಂಸ್ಥೆಗಳು ಒಂದಾಗಿ ಇಂತಹ ಕಠಿಣ ಸಂದರ್ಭದಲ್ಲಿ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಕೆಲಸ ಮಾಡುತ್ತಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಹೇಳಿದರು.
ಅವರು ಸುರತ್ಕಲ್ ಬಂಟರ ಸಂಘ ಮತ್ತು ಬಂಟರ ಮಹಿಳಾ ವೇದಿಕೆಯ ವತಿಯಿಂದ ಸುಮಾರು 200 ಜನರ ಎಲ್ಲಾ ಸಮುದಾಯವರಿಗೆ ಪ್ರತಿಯೊಬ್ಬರಿಗೂ ತಲಾ 1000 ರೂಪಾಯಿಯ ದಿನನಿತ್ಯ ಅಗತ್ಯವಾದ ಆಹಾರದ ಕಿಟ್ ವಿತರಿಸಿ ಮಾತನಾಡಿದರು. ವಿಶ್ವಕ್ಕೆ ಮಾರಕವಾದ ಕೊರೊನಾ ರೋಗವನ್ನು ತೊಡೆದುಹಾಕಲು ಸರಕಾರವು ಬಹಳ ಹರಸಾಹಸಪಡುತ್ತಿದ್ದು ನಾವೆಲ್ಲರೂ ಒಗ್ಗಟ್ಟಾಗಿ ಸೇರಿಕೊಂಡು ಸರಕಾರಕ್ಕೆ ಆದಷ್ಟು ಮಾನಸಿಕವಾಗಿ ಸಹಾಯ ಮಾಡಬೇಕು ಎಂದರು.

ಆದಷ್ಟು ಮನೆಯಲ್ಲಿದ್ದು ಕೆಲಸ ಕಾರ್ಯಗಳನ್ನು ಮಾಡಿಕೊಂಡು ಅಗತ್ಯವಿದ್ದಲ್ಲಿ ಮಾತ್ರ ತಮಗೆ ಬೇಕಾಗುವ ವಸ್ತುಗಳಿಗಾಗಿ ಮಾತ್ರ ಹೊರ ಬಂದು ತಮ್ಮ ಆರೋಗ್ಯದ ಕಡೆ ಸಾಕಷ್ಟು ಕಾಳಜಿವಹಿಸಬೇಕುಎಂದು ವಿನಂತಿಸಿದರು‌. ಸಂದರ್ಭ ಮನಪಾ ಸದಸ್ಯರಾದ  ವರುಣ್ ಚೌಟ, ಶ್ವೇತಾ ಪೂಜಾರಿ, ನಯನಾ ಕೋಟ್ಯಾನ್, ಮಾಜಿ ಕಾರ್ಪೋರೇಟರ್ ಗುಣ ಶೇಖರ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ  ಸುಧಾಕರ ಎಸ್ ಪೂಂಜ, ನಿಕಟ ಪೂರ್ವ ಅಧ್ಯಕ್ಷ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ, ಉಪಾಧ್ಯಕ್ಷ ನವೀನ್ ಶೆಟ್ಟಿ ಪಡ್ರೆ, ಪ್ರಧಾನ ಕಾರ್ಯದರ್ಶಿ ಲೋಕಯ್ಯ ಶೆಟ್ಟಿ ಮುಂಚೂರು, ಜತೆ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ,ಕೋಶಾಧಿಕಾರಿ ರತ್ನಾಕರ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಮಹಿಳಾ ವೇದಿಕೆಯ ಅಧ್ಯಕ್ಷೆ ಬೇಬಿ ಶೆಟ್ಟಿ, ಕಾರ್ಯದರ್ಶಿ ಚಿತ್ರಾ ಜೆ. ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ನಿರ್ದೇಶಕರು ಮತ್ತಿತ್ತರು ಉಪಸ್ಥಿತರಿದ್ದರು.

Pages