ಸಮಾಜ ಪರ ಕೆಲಸಕ್ಕೆ ಹೆಚ್ಚಿನ ಒತ್ತು : ಐಕಳ ಹರೀಶ್ ಶೆಟ್ಟಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಸಮಾಜ ಪರ ಕೆಲಸಕ್ಕೆ ಹೆಚ್ಚಿನ ಒತ್ತು : ಐಕಳ ಹರೀಶ್ ಶೆಟ್ಟಿ

Share This

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಭೆ

ಬಂಟ್ಸ್ ನ್ಯೂಸ್, ಮಂಗಳೂರು : ಕೊರೊನಾ ಸಮಸ್ಯೆಯಿಂದ ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಸ್ವಲ್ಪ ಸಮಯ ಕಾರ್ಯ ಚಟುವಟಿಕೆಯಿಂದ ಸ್ಥಗಿತಗೊಂಡಿತ್ತು. ಒಕ್ಕೂಟವು ಮತ್ತೆ ಸಮಾಜ ಪರವಾಗಿ ಕೆಲಸ ಮಾಡಲು ಶಕ್ತಿಮೀರಿ ಶ್ರಮಿಸಲಿದೆ ಎಂದು ಜಾಗತಿಕ ಬಂಟರ ಸಂಘಗಳ   ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು.

ಅವರು ಬಂಟ್ಸ್ ಹಾಸ್ಟೆಲ್ನಲ್ಲಿರುವ ಅಮೃತೋತ್ಸವ ಕಟ್ಟಡದ  ಸಭಾಂಗಣದಲ್ಲಿ ನಡೆದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮೂರು ಕೋಟಿ ನಲ್ವತ್ತು ಲಕ್ಷ ರೂಪಾಯಿಗೂ ಮಿಕ್ಕಿ ಹಣವನ್ನು ಸಮಾಜದ ಕೆಲಸ ಕಾರ್ಯಗಳಿಗೆ ವಿನಿಯೋಗಿಸಿದೆ ಎಂದರು.


ಒಕ್ಕೂಟವು ಈಗಾಗಲೇ 2 ಕೋಟಿ ರೂಪಾಯಿಗೂ ಹೆಚ್ಚು ಖರ್ಚು ಮಾಡಿ 120 ಮನೆಗಳನ್ನು ನಿರ್ಮಿಸಿದೆ. ಸುಮಾರು 125 ಹೆಣ್ಮಕ್ಕಳಿಗೆ ಮದುವೆಗಾಗಿ 30 ಲಕ್ಷ ರೂಪಾಯಿ ನೀಡಿದೆ. ವಿದ್ಯಾಭ್ಯಾಸಕ್ಕೆ 25 ಲಕ್ಷ ರೂ, ಅನಾಥ ಮಕ್ಕಳ ದತ್ತು ಪಡೆದು 2 ಲಕ್ಷ ರೂಪಾಯಿ ಖರ್ಚು ಮಾಡಲಾಗಿದೆ. ವೈದ್ಯಕೀಯ ವೆಚ್ಚಕ್ಕಾಗಿ ಸುಮಾರು 250 ಜನರಿಗೆ 50 ಲಕ್ಷ ರೂಪಾಯಿಗೂ ಮಿಕ್ಕಿ ಹಣವನ್ನು ನೀಡಲಾಗಿದೆ ಎಂದು ಐಕಳ ಹರೀಶ್ ಶೆಟ್ಟಿ ತಿಳಿಸಿದರು.


ಮುಂದಿನ ದಿನಗಳಲ್ಲಿ ಐಎಎಸ್, ಐಪಿಎಸ್, ಕೆ..ಎಸ್, ವಿದ್ಯಾಭ್ಯಾಸ ಪಡೆಯುವ ವಿದ್ಯಾರ್ಥಿಗಳಿಗೆ ಒಕ್ಕೂಟವು ಆರ್ಥಿಕ ನೆರವು ನೀಡಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ 80 ಶೇಕಡಾ ಅಧಿಕ ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲು ತೀರ್ಮಾನಿಸಲಾಯಿತು.


ಬಂಟ ಸಮಾಜಕ್ಕೆ ಅನುಕೂಲವಾಗುವಂತೆ 3ಬಿ ಮೀಸಲಾತಿಯನ್ನು  2 ಗೆ ಪರಿವರ್ತಿಸಲು  ಸರಕಾರದ ಮೇಲೆ ಒತ್ತಡ ತರಲಾಗುವುದು. ಇದಕ್ಕಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಬಂಟರ ಯಾನೆ ನಾಡವರ ಮಾತೃ ಸಂಘದೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ  ಕೈಗೊಳ್ಳಲಿದೆ ಎಂದು ಐಕಳ ಹರೀಶ್ ಶೆಟ್ಟಿ ತಿಳಿಸಿದರು.


ಸಮಾರಂಭದಲ್ಲಿ ಸಮಾಜ ಸೇವಕರು ದಾನಿಗಳಾದ ಮುಂಬೈ ಕೃಷ್ಣ ಪ್ಯಾಲೇಸಿನ ಮಾಲಕ ಕೃಷ್ಣ ಶೆಟ್ಟಿ ಮತ್ತು ಉಮಾ ಕೃಷ್ಣ ಶೆಟ್ಟಿ ದಂಪತಿಗಳನ್ನು ಸನ್ಮಾನಿಸಲಾಯಿತು.


ಒಕ್ಕೂಟವು ಸಮಾಜದ ಪರವಾಗಿ ಕೆಲಸ ಮಾಡುತ್ತಿರುವುದನ್ನು ಕಂಡು  ಹೆಮ್ಮೆಯಾಗುತ್ತಿದೆ. ಒಕ್ಕೂಟದ ಜನಪರ ಕೆಲಸಗಳಿಗೆ ತಾವು ಯಾವಾಗಲೂ ಕೈ ಜೋಡಿಸುತ್ತೇವೆ ಎಂದು ಮುಂಬೈ ಬಂಟರ ಮಹಿಳಾ ಘಟಕದ ಉಪ ಕಾರ್ಯದರ್ಶಿ ಉಮಾ ಕೃಷ್ಣ ಶೆಟ್ಟಿ ತಿಳಿಸಿದರು.


ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಸ್ವಾಗತಿಸಿ, ಪ್ರಸ್ತಾವನೆ ಗೈದರು. ನಿಧನರಾದ ಗಣ್ಯರಿಗೆ ಸಭೆಯಲ್ಲಿ ಸಂತಾಪ ವ್ಯಕ್ತಪಡಿಸಲಾಯಿತು. ಸಭೆಯಲ್ಲಿ ಲೆಕ್ಕಪತ್ರಗಳನ್ನು ಮಂಡಿಸಿ ಮಂಜೂರಾತಿ ಪಡೆಯಲಾಯಿತು. ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಅವರು ಒಕ್ಕೂಟವು ಮುಂದೆ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮದ ಕುರಿತು ಸಭೆಗೆ ಮಾಹಿತಿ ನೀಡಿದರು.


ಸಭೆಯಲ್ಲಿ ಬಹರೈನ್ ಬಂಟರ ಸಂಘದ ಮಾಜಿ ಅಧ್ಯಕ್ಷ ಸುಧಾಕರ ಶೆಟ್ಟಿ, ಶಶಿಧರ ಶೆಟ್ಟಿ ಅವರನ್ನುಗೌರವಿಸಲಾಯಿತು. ಪ್ರಿನ್ಸಿಪಾಲ್ ಬಾಲಕೃಷ್ಣ ಶೆಟ್ಟಿ, ಡಾ. ಆಶಾಜ್ಯೋತಿ ರೈ, ವಸಂತ ಶೆಟ್ಟಿ, ಕೃಷ್ಣ ಪ್ರಸಾದ ರೈ, ಕಾವು ಹೇಮನಾಥ ಶೆಟ್ಟಿ, ಪುಷ್ಪರಾಜ ಶೆಟ್ಟಿ ಕುಡುಂಬೂರು, ಥಾಣೆ ಬಂಟರ ಸಂಘದ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ, ಮುಲ್ಕಿ ಸಂತೋಷ್ ಕುಮಾರ್ ಹೆಗ್ಡೆ ಮೊದಲಾದವರು ಸಲಹೆಗಳನ್ನು ನೀಡಿದರು. ಸಭೆಯಲ್ಲಿ ಬಂಟರ ಸಂಘಗಳ ಅಧ್ಯಕ್ಷರನ್ನು, ಪದಾಧಿಕಾರಿಗಳನ್ನು ಗುರುತಿಸಿ ಗೌರವಿಸಲಾಯಿತು.

ಒಕ್ಕೂಟದ ಜತೆ ಕಾರ್ಯದರ್ಶಿ ಸತೀಶ್ ಅಡಪ ಸಂಕಬೈಲ್ ವಂದಿಸಿದರು. ಒಕ್ಕೂಟದ ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್ ಉಪಸ್ಥಿತರಿದ್ದರು.

Pages