ಬಂಟ್ಸ್ ನ್ಯೂಸ್, ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಡಿ.1ರಂದು ಬಂಟ್ಸ್ ಹಾಸ್ಟೇಲಿನ ಶ್ರೀಮತಿ ಗೀತಾ ಎಸ್.ಎಂ ಶೆಟ್ಟಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಆಶಕ್ತರಿಗೆ ಆರ್ಥಿಕ ನೆರವು ವಿತರಣೆಯ ಕಾರ್ಯಕ್ರಮವು ನಡೆಯಲಿದೆ.
ದ.ಕ ಜಿಲ್ಲೆಯ ಮಂಗಳೂರು,
ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಾಸರಗೋಡು
ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಅವಶ್ಯಕತೆಗಳಿಗೆ
ಸಂಬಂಧಿಸಿದಂತೆ ಆರ್ಥಿಕ ನೆರವು ವಿತರಣೆ
ನಡೆಯಲಿದೆ.
ಸಮಾರಂಭದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಮುಂಬಯಿ ಬಂಟ್ಸ್ ಸಂಘದ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ, ವಿ.ಕೆ ಗ್ರೂಪ್ಸ್ ಚೆಯರ್ ಮೆನ್ ಕೆ.ಎಂ ಶೆಟ್ಟಿ, ಮೇಯರ್ ದಿವಾಕರ್ ಪಾಂಡೇಶ್ವರ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾೈಕ್, ಡಾ. ವೈ ಭರತ್ ಶೆಟ್ಟಿ, ಉಮಾನಾಥ್ ಎ ಕೋಟ್ಯಾನ್, ಹರೀಶ್ ಪೂಂಜ, ಯು.ಟಿ ಖಾದರ್, ಅಂಗಾರ ಎಸ್, ಸಂಜೀವ ಮಂಠಂದೂರು, ಮಾಜೀ ಸಚಿವರಾದ ಬಿ ರಮಾನಾಥ ರೈ, ಕೆ ಅಭಯಚಂದ್ರ ಜೈನ್, ಬಿ ನಾಗರಾಜ್ ಶೆಟ್ಟಿ, ಶಕುಂತಲ ಶೆಟ್ಟಿ, ರಾಜೇಶ್ ಶೆಟ್ಟಿ, ಮಿಥುನ್ ರೈ ಮೊದಲಾದವರು ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಲಿಂಗಪ್ಪ ಸೇರಿಗಾರ್ ಕಟೀಲು ಅವರನ್ನು ಸನ್ಮಾನಿಸಲಾಗುವುದು.
ಸಮಾರಂಭದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಹಿಸಲಿದ್ದಾರೆ ಎಂದು ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ ಗೌರವ ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಜತೆ ಕಾರ್ಯದರ್ಶಿ ಸತೀಶ್ ಅಡಪ ಸಂಕಬೈಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.