ಬಂಟ್ಸ್ ನ್ಯೂಸ್, ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಬಂಟ ಸಮಾಜದ ವಿದ್ಯಾರ್ಥಿಗಳಿಗೆ ಸಹಾಯ ಧನ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ.
2019-20ರ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪಾಸಾದ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಶೇಕಡಾ 80ಕ್ಕೂ ಮಿಕ್ಕಿ ಅಂಕಗಳಿಸಿದ ಬಿಪಿಎಲ್ ಕಾರ್ಡ್ ಕುಟುಂಬದ ವಿದ್ಯಾರ್ಥಿಗಳಿಗೆ ಮತ್ತು ಶೇಕಡಾ 95ಕ್ಕೂ ಮಿಕ್ಕಿ ಅಂಕ ಗಳಿಸಿದ ಇನ್ನಿತರ ಕುಟುಂಬದ ವಿದ್ಯಾರ್ಥಿಗಳು ಅರ್ಜಿಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಬಂಟ್ಸ್ ಹಾಸ್ಟೆಲ್ ಇಲ್ಲಿಗೆ ನವಂಬರ್ 20ರ ಒಳಗೆ ಕಳುಹಿಸಬಹುದಾಗಿದೆ ಎಂದು ಒಕ್ಕೂಟದ ಗೌರವ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.
ನವಂಬರ್ 20ರಂದು ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣ ಉಡುಪಿ ಇಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ.