ನ.29ರಂದು ಉಡುಪಿಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ 1.50 ಕೋಟಿ ರೂ. ಸಹಾಯ ವಿತರಣೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ನ.29ರಂದು ಉಡುಪಿಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ 1.50 ಕೋಟಿ ರೂ. ಸಹಾಯ ವಿತರಣೆ

Share This

ಬಂಟ್ಸ್ ನ್ಯೂಸ್, ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ 1.50 ಕೋಟಿ ರೂ.ಗಳ ಸಮಾಜ ಕಲ್ಯಾಣ ಸಹಾಯಹಸ್ತ ವಿತರಣೆ ಕಾರ್ಯಕ್ರಮವು ನ.29ರಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ.

bunts
bunts

ಕಾರ್ಯಕ್ರಮದಲ್ಲಿ ಸುಮಾರು 1.50 ಕೋಟಿ ರೂಪಾಯಿ ವೆಚ್ಚದ ಯೋಜನೆಯಲ್ಲಿ ಕೊರೊನಾ ಸಂತ್ರಸ್ತರಿಗೆ ಸಹಾಯ, ವೈದ್ಯಕೀಯ ನೆರವು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವಸತಿ ರಹಿತರಿಗೆ ಮತ್ತು ವಸತಿ ರಿಪೇರಿಗೆ ಸಹಾಯಧನ, ಹೆಣ್ಣುಮಕ್ಕಳ ವಿವಾಹಕ್ಕೆ ನೆರವು ಮುಂತಾದ ಅವಶ್ಯಕತೆಗಳಿಗೆ ಸಹಾಯ ಧನ ವಿತರಿಸಲಾಗುವುದು ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ.


ಇದೇ ಸಂದರ್ಭದಲ್ಲಿ ಸಮಾಜ ಸೇವಕ, ಉದ್ಯಮಿ, ಒಕ್ಕೂಟದ ನಿರ್ದೇಶಕ, ಕರ್ನಾಟಕ ರಾಜ್ಯ ಸರಕಾರದ 2020ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕುಸುಮೋದರ ಡಿ ಶೆಟ್ಟಿ ಚೆಲ್ಲಡ್ಕ ದಂಪತಿಯನ್ನು ಸನ್ಮಾನಿಸಲಾಗುವುದು.


ಸಮಾರಂಭದಲ್ಲಿ  ಭಾರತೀಯ ಜನತಾ ಪಕ್ಷದ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು, ಇಂಟರ್  ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ . ಸದಾನಂದ ಶೆಟ್ಟಿ,  ಉದ್ಯಮಿಗಳಾದ ಆನಂದ ಶೆಟ್ಟಿ ಮುಂಬಾಯಿ,   ಉಡುಪಿ ಕ್ಷೇತ್ರದ ಶಾಸಕ ಕೆ. ರಘುಪತಿ ಭಟ್, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಸುನೀಲ್ ಕುಮಾರ್ ಕಾರ್ಕಳ, ಲಾಲಾಜಿ ಮೆಂಡನ್ ಕಾಪು, ಸುಕುಮಾರ್ ಶೆಟ್ಟಿ  ಬೈಂದೂರು, ಕೆ ಜಯ ಪ್ರಕಾಶ್ ಹೆಗ್ಡೆ, ಕೆ ಪ್ರತಾಪ್ ಚಂದ್ರ ಶೆಟ್ಟಿ,   ಎಂಆರ್ಜಿ. ಗ್ರೂಪ್  ಚೆಯರ್  ಮೆನ್   ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಶಶಿಧರ  ಶೆಟ್ಟಿ ಬರೋಡಾ, ಡಾ. ವಿರಾರ್ ಶಂಕರ್ ಶೆಟ್ಟಿ, ಶಶಿಧರ್ ಶೆಟ್ಟಿ ಓಮನ್, ದಿವಾಕರ್ ಶೆಟ್ಟಿ ಮಲ್ಲಾರ್ ಮಸ್ಕತ್, ಸಂತೋಷ್ ಶೆಟ್ಟಿ ಪೂನಾ, ಮುರಳಿ ಮೋಹನ್ ಶೆಟ್ಟಿ ಗೋವಾ, ರತ್ನಾಕರ ಶೆಟ್ಟಿ ಮುಂಡ್ಕೂರು, ಜಗನ್ನಾಥ ರೈ, ಪ್ರದೀಪ್ ಶೆಟ್ಟಿ ದುಬಾಯಿ, ಅಜಿತ್ ಚೌಟ ನೈಜಿರಿಯಾ,  ಮಂಜುನಾಥ ಶೆಟ್ಟಿ, ರಂಜನಿ ಸುಧಾಕರ ಹೆಗ್ಡೆ,  ಮನೋರಮ ಎನ್. ಬಿ ಶೆಟ್ಟಿ ಮೊದಲಾದವರು ಭಾಗವಹಿಸಲಿದ್ದಾರೆ.


ಬೆಳಿಗ್ಗೆ 10 ಗಂಟೆಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ.

Pages