BUNTS NEWS, ಮಂಗಳೂರು: ಸಾಮಾಜಿಕ ಕಳಕಳಿ, ಔದ್ಯಮಿಕ ಸಾಧನೆ, ಮಾನವೀಯ ಗುಣಗಳಿಂದ ಅಪಾರ ಜನಾನುರಾಗ ಗಳಿಸಿರುವ ಕುಸುಮೋಧರ ದೇರಣ್ಣ ಶೆಟ್ಟರಿಗೆ ರಾಜ್ಯೋತ್ಸವ ಪ್ರಶಸ್ತಿ ಸಹಜವಾಗಿಯೇ ಲಭಿಸಿದೆ. ಸದಾ ಸಮಾಜಮುಖೀ ಚಿಂತನೆಗಳಿಂದ ಹುಟ್ಟೂರು ಮತ್ತು ಹೊರನಾಡುಗಳಲ್ಲಿ ಕ್ರಿಯಾಶೀಲರಾಗಿರುವ ಅವರ ಜೀವನಾದರ್ಶ ಯುವಕರಿಗೆ ಮಾದರಿ ಎಂದು ಕರ್ನಾಟಕ ಜಾನಪದ - ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಹಾಗೂ ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ.


ಅವರು ಯಕ್ಷಾಂಗಣ
ಮಂಗಳೂರು ಯಕ್ಷಗಾನ ಚಿಂತನ-ಮಂಥನ ಮತ್ತು ಪ್ರದರ್ಶನ ವೇದಿಕೆ ಹಾಗೂ ಕರ್ನಾಟಕ ಯಕ್ಷ ಭಾರತಿ ಪುತ್ತೂರು
ಇವರ ಆಶ್ರಯದಲ್ಲಿ ನವೆಂಬರ್ 29ರಂದು ಶಕ್ತಿನಗರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪಾರಿಜಾತ ಸಭಾಂಗಣದಲ್ಲಿ
ಕನ್ನಡ ರಾಜ್ಯೋತ್ಸವ ಕಲಾಸಂಭ್ರಮದ ಅಂಗವಾಗಿ ಜರಗಿದ ಯಕ್ಷಗಾನ ತಾಳಮದ್ದಳೆ ಪರ್ವ - 2020 ಎಂಟನೇ ವರ್ಷದ
ನುಡಿಹಬ್ಬ ಸಂದರ್ಭ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೊರನಾಡ ಕನ್ನಡಿಗ ಕೆ.ಡಿ ಶೆಟ್ಟಿ
ಅವರಿಗೆ ಏರ್ಪಡಿಸಲಾದ ಅಭಿನಂದನಾ ಸಮಾರಂಭದಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತಾಡಿ ಅಭಿನಂದನೆ ಸಲ್ಲಿಸಿದರು.
ಬ್ಯಾಂಕ್ ಆಫ್ ಬರೋಡ
ಮಂಗಳೂರು ವಲಯ ಮಹಾಪ್ರಬಂಧಕಿ ಸುಜಯ ಯು.ಶೆಟ್ಟಿ ಅವರು ಯಕ್ಷಾಂಗಣ ವತಿಯಿಂದ ಶಾಲು, ಸ್ಮರಣಿಕೆ, ಸಮ್ಮಾನ
ಫಲಕ ಮತ್ತು ಬಿನ್ನವತ್ತಳೆ ನೀಡಿ ಕೆ.ಡಿ ಶೆಟ್ಟರನ್ನು ಸನ್ಮಾನಿಸಿದರು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ
ಪರಿಷತ್ ಅಧ್ಯಕ್ಷ ಪ್ರದೀಪ ಕುಮಾರ್ ಕಲ್ಕೂರ ಅಧ್ಯಕ್ಷತೆ ವಹಿಸಿದ್ದರು. ಶಕ್ತಿನಗರ ಶ್ರೀ ಗೋಪಾಲಕೃಷ್ಣ
ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಕೆ.ಸಿ.ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಮಾರಂಭದಲ್ಲಿ ಕನ್ನಡ
ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರ ಜೀವಮಾನ ಸಾಧನೆಗಾಗಿ
ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ ಮತ್ತು ಹಿರಿಯ ಯಕ್ಷಗಾನ ವೇಷದಾರಿ ಮತ್ತು ಮೇಳದ ಸಂಚಾಲಕ ಕೆ.ಎಚ್.ದಾಸಪ್ಪ
ರೈ ಪುತ್ತೂರು ಅವರಿಗೆ 2019-20 ನೇ ಸಾಲಿನ ಯಕ್ಷಾಂಗಣ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೆ.
ರವೀಂದ್ರ ರೈ ಕಲ್ಲಿಮಾರು, ನಿವೇದಿತಾ ಎನ್.ಶೆಟ್ಟಿ ಮತ್ತು ಸುಮಾ ಪ್ರಸಾದ್ ಸಮ್ಮಾನ ಫಲಕ ವಾಚಿಸಿದರು.
ಮಹೇಶ್ ಮೋಟಾರ್ಸ್
ಮಾಲಕ ಎ.ಕೆ. ಜಯರಾಮ ಶೇಖ, ದ.ಕ.ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಪಮ್ಮಿ ಕೊಡಿಯಾಲಬೈಲ್, ಪುಳಿಂಚ ಸೇವಾ ಟ್ರಸ್ಟ್ ಅಧ್ಯಕ್ಷ ನ್ಯಾಯವಾದಿ ಶ್ರೀಧರ ಶೆಟ್ಟಿ
ಪುಳಿಂಚ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಲೀಲಾಕ್ಷ ಬಿ. ಕರ್ಕೇರ ಮತ್ತು ಮುಂಬಯಿಯ ಕಲಾಸಂಘಟಕ
ಕರ್ನೂರು ಮೋಹನ ರೈ ಮುಖ್ಯ ಅತಿಥಿಗಳಾಗಿದ್ದರು.
ಯಕ್ಷಾಂಗಣದ ಕಾರ್ಯಾಧ್ಯಕ್ಷ
ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ನಿರೂಪಿಸಿದರು.
ತುಳುವರ್ಲ್ಡ್ ಅಧ್ಯಕ್ಷ ರಾಜೇಶ್ ಕೃಷ್ಣ ಆಳ್ವ ವಂದಿಸಿದರು.ಯಕ್ಷಾಂಗಣದ ಪದಾಧಿಕಾರಿಗಳಾದ ಕರುಣಾಕರ
ಶೆಟ್ಟಿ ಪಣಿಯೂರು,ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ, ಸುಧಾಕರ ರಾವ್ ಪೇಜಾವರ, ಉಮೇಶಾಚಾರ್ಯ ಗೇರುಕಟ್ಟೆ,
ಸಿದ್ಧಾರ್ಥ ಅಜ್ರಿ, ಕೃಷ್ಣಪ್ಪಗೌಡ ಪಡ್ಡಂಬೈಲ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ
ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ 'ಶ್ರೀ ಕೃಷ್ಣ ತಂತ್ರ-ಮಾರುತಿ ಪ್ರತಾಪ' ಯಕ್ಷಗಾನ ತಾಳಮದ್ದಳೆ ಜರಗಿತು.