ಬಂಟ್ಸ್ ನ್ಯೂಸ್, ಸುರತ್ಕಲ್: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುರತ್ಕಲ್ ಬಂಟರ ಸಂಘದ ವಾರ್ಷಿಕ ಸಮಾವೇಶ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಡಿ.20ರ ಭಾನುವಾರ ಸಂಜೆ 5ಕ್ಕೆ ನಡೆಯಲಿದೆ.



ಸುರತ್ಕಲ್ ಬಂಟರ
ಸಂಘದ ಅಧ್ಯಕ್ಷ ಸುಧಾಕರ ಎಸ್. ಪೂಂಜ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು ಸಮಾರಂಭವನ್ನು
ಬಂದರು, ಮೀನುಗಾರಿಕೆ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಸಚಿವ ಹಾಗೂ ದಕ ಜಿಲ್ಲಾ ಉಸ್ತುವಾರಿ
ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಟಾಟಿಸಲಿದ್ದಾರೆ.
ಸಮಾರಂಭದಲ್ಲಿ ಉದ್ಯಮಿ,
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚೆಲ್ಲಡ್ಕ ಕುಸುಮೋದರ ಡಿ. ಶೆಟ್ಟಿ ಅವರಿಗೆ, ಕಂಬಳ ಕ್ರೀಡಾ ಪುರಸ್ಕೃತ
ಖಂಡಿಗೆ ಗೋಪಾಲಕೃಷ್ಣ ಸರ್ವೋತ್ತಮ ಪ್ರಭು, ದಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪದ್ಮನಾಭ
ಕೆ. ಸುರತ್ಕಲ್ ಹಾಗೂ ದಕ ಜಿಲ್ಲಾ ರಾಜ್ಯೋತ್ಸವ ಪಶಸ್ತಿ ಪುರಸ್ಕೃತ ಯೋಗಿಶ್ ಕಾಂಚನ್ ಬೈಕಂಪಾಡಿ ಅವರಿಗೆ ಸನ್ಮಾನ ಹಾಗೂ ಶೈಕ್ಷಣಿಕ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಅಭಿನಂದನೆ ನಡೆಯಲಿದೆ.
ಮಧ್ಯಬೀಡು ದಿ. ರಾಘು ಸಿ. ಶೆಟ್ಟಿ ಇವರ ಸ್ಮರಣಾರ್ಥ ಡಾ. ಪಿ.ವಿ. ಶೆಟ್ಟಿ ಮುಂಬಯಿ ಅವರು ವರ್ಷಂಪ್ರತಿ ನೀಡುವ ವಿದ್ಯಾರ್ಥಿವೇತನ ವಿತರಣೆ, ಭಿನ್ನ ಸಾಮರ್ಥ್ಯ ಹಾಗೂ ವಿಕಲಚೇತನರಿಗೆ ಸಹಾಯಹಸ್ತದ ಕಾರ್ಯಕ್ರಮವು ಜರಗಲಿದೆ.
ಕಾರ್ಯಕ್ರಮದಲ್ಲಿ
ಮಂಗಳೂರು ಉತ್ತರ ಶಾಸಕ ಡಾ.ವೈ. ಭರತ್ ಶೆಟ್ಟಿ, ಮೂಲ್ಕಿ ಶಾಸಕ ಎ. ಉಮಾನಾಥ್ ಕೋಟ್ಯಾನ್ ಅವರ ಘನ ಉಪಸ್ಥಿತಿ
ಇರಲಿದೆ. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಸಣ್ಣ ನೀರಾವರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಗೋಕುಲ್
ದಾಸ್, ಸುರತ್ಕಲ್ ವಿಜಯ ಮೆಡಿಕಲ್ಸ್ ದಯಾನಂದ ಡಿ. ಶೆಟ್ಟಿ, ಮುಂಬೈ ಬಂಟರ ಸಂಘದ ಸಾಹಿತ್ಯ ಮತ್ತು ಸಾಂಸ್ಕೃತಿಕ
ಸಮಿತಿ ಕಾರ್ಯಾಧ್ಯಕ್ಷ ಕರ್ನೂರ್ ಮೋಹನ್ ರೈ, ಮಂಗಳೂರು ಪ್ರಸಾರ ಭಾರತಿ ಅಧ್ಯಕ್ಷ ಪುರುಷೋತ್ತಮ ಕೆ.
ಭಂಡಾರಿ ಹಾಗೂ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
ಅಂದು ಮಧ್ಯಾಹ್ನ 2.30ಕ್ಕೆ ಬಂಟರ ಭವನದಲ್ಲಿ ಸುರತ್ಕಲ್ ಬಂಟರ ಸಂಘದ ಮಹಾಸಭೆ ನಡೆಯಲಿದೆ. ಸಂಜೆ 4 ಗಂಟೆಗೆ ಗ್ರಾಮವಾರು ನೃತ್ಯ ಸ್ಪರ್ಧೆ ನಡೆಯಲಿದೆ ಬಳಿಕ ಸಂಜೆ 5 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಸುರತ್ಕಲ್ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಲೋಕಯ್ಯ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.