ಬಡ ಬಂಟರನ್ನು ಮುಳಿಹುಲ್ಲಿನ ಮನೆಯಿಂದ ಮುಕ್ತಗೊಳಿಸುವುದು ನಮ್ಮ ಉದ್ದೇಶ : ಐಕಳ ಹರೀಶ್ ಶೆಟ್ಟಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಡ ಬಂಟರನ್ನು ಮುಳಿಹುಲ್ಲಿನ ಮನೆಯಿಂದ ಮುಕ್ತಗೊಳಿಸುವುದು ನಮ್ಮ ಉದ್ದೇಶ : ಐಕಳ ಹರೀಶ್ ಶೆಟ್ಟಿ

Share This

 ಜಾಗತಿಕ ಬಂಟರ  ಸಂಘಗಳ ಒಕ್ಕೂಟದಿಂದ ಆರ್ಥಿಕ ನೆರವು

ಬಂಟ್ಸ್ ನ್ಯೂಸ್, ಮಂಗಳೂರು: ಬಂಟ ಸಮಾಜದಲ್ಲಿ ಅಸಹಾಯಕರಾಗಿರುವ ಸಮಾಜದವರನ್ನು ಗುರುತಿಸಿ ಆರ್ಥಿಕ ಸಹಾಯ ವಸತಿ ನಿರ್ಮಾಣ, ವೈದ್ಯಕೀಯ ನೆರವು, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಹೆಣ್ಣು ಮಕ್ಕಳ ವಿವಾಹ ನೆರವು ಇತ್ಯಾದಿ ಸಹಾಯವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟ ನಿರಂತರ ನೀಡುತ್ತಾ ಬಂದಿದೆ ಎಂದು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು.

ನಗರದ ಬಂಟ್ಸ್ ಹಾಸ್ಟೆಲ್ನಲ್ಲಿರುವ ಅಮೃತೋತ್ಸವ ಕಟ್ಟಡದಲ್ಲಿ ನಡೆದ 2021 ಸಾಲಿನಲ್ಲಿ  ಸಮಾಜ ಕಲ್ಯಾಣ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ  ಚೆಕ್ ವಿತರಿಸಿ ಮಾತನಾಡಿದರು. ಕಳೆದ ತಿಂಗಳು ಅವಳಿ ಜಿಲ್ಲೆಯಲ್ಲಿ 1.50 ಕೋಟಿ ರೂಪಾಯಿಗೂ ಮಿಕ್ಕಿದ ಆರ್ಥಿಕ ಸಹಾಯವನ್ನು ಬಂಟ ಸಮಾಜದವರ ಜೊತೆ ಎಲ್ಲಾ ಸಮಾಜದ ದುರ್ಬಲರು, ಅಶಕ್ತರಿಗೆ ನೆರವು ಒದಗಿಸಲಾಗಿತ್ತು ಎಂದರು.


ಬಂಟ ಸಮಾಜದಲ್ಲಿರುವ ಬಡವರನ್ನು ಮುಳಿ ಹುಲ್ಲಿನ ಮನೆಯಿಂದ ಮುಕ್ತಿಗೊಳಿಸುವುದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಖ್ಯ ಉದ್ದೇಶವಾಗಿದೆ. ಓದಲು ಅಸಕ್ತರಾಗಿರುವ ವಿದ್ಯಾರ್ಥಿಗಳಿಗೆ ನೆರವು ನೀಡುವ ಉದ್ದೇಶದಿಂದಲೇ ಮೂವರು ವಿದ್ಯಾರ್ಥಿಗಳನ್ನು ಒಕ್ಕೂಟ ದತ್ತು ತೆಗೆದು ಕೊಂಡಿದೆ. ಕೆಂಜಾರು ಬಳಿ ಗುಡಿಸಲಲ್ಲಿ ವಾಸಿಸುವ ಮಹಿಳೆಗೆ ಮನೆ ಕಟ್ಟಿಕೊಡಲಾಗುತ್ತಿದೆ ಎಂದು ಐಕಳ ಹರೀಶ್ ಶೆಟ್ಟಿ ತಿಳಿಸಿದರು.


ಕಾರ್ಯಕ್ರಮದಲ್ಲಿ 19 ಜನರಿಗೆ ಮನೆ ರಿಪೇರಿ ಮತ್ತು ಮನೆ ಕಟ್ಟಲು ನೆರವು, 30 ಮಂದಿಗೆ ವೈದ್ಯಕೀಯಕ್ಕೆ,   16 ಮಂದಿ ಹೆಣ್ಣು ಮಕ್ಕಳಿಗೆ ಮದುವೆಗೆ, 30 ಮಂದಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲಾಯಿತು. ಸಮಾರಂಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜತೆ ಕಾರ್ಯದರ್ಶಿ ಸತೀಶ್ ಅಡಪ ಸಂಕಬೈಲ್ ಉಪಸ್ಥಿತರಿದ್ದರು.


ಸಮಾರಂಭದಲ್ಲಿ ಮೂವರು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಗೌರವಿಸಿದರು. ಸಂದರ್ಭದಲ್ಲಿ ಒಕ್ಕೂಟದ ಮಾಜೀ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜ, ಗುರುಪುರ ಬಂಟರ ಮಾತೃ ಸಂಘದ ಅಧ್ಯಕ್ಷ ರಾಜ್ ಕುಮಾರ್ ಶೆಟ್ಟಿ, ಉಲ್ಲಾಸ್ ಶೆಟ್ಟಿ ಪೆರ್ಮುದೆ, ಸುದರ್ಶನ್ ಶೆಟ್ಟಿ ಪೆರ್ಮಂಕಿ, ಜಗನ್ನಾಥ್ ಶೆಟ್ಟಿ ಬಾಳ, ಜೀವನ್ ಶೆಟ್ಟಿ ಮುಲ್ಕಿ, ಮೋಹನ್ ಶೆಟ್ಟಿ ಉಡುಪಿ ಒಕ್ಕೂಟದ ಆಡಳಿತಾಧಿಕಾರಿ ಸಚ್ಚಿದಾನಂದ ಶೆಟ್ಟಿ ಕೊಳ್ಕೆಬೈಲ್ ಮೊದಲಾದವರು ಉಪಸ್ಥಿತರಿದ್ದರು. ಜಯಕರ ಶೆಟ್ಟಿ ಇಂದ್ರಾಳಿ ಸ್ವಾಗತಿಸಿದರು. ಸತೀಶ್ ಅಡಪ ಸಂಕಬೈಲ್ ವಂದಿಸಿದರು.

Pages