ಮಂಗಳೂರು : ಕೊರೋನಾ ಸಂದರ್ಭದಲ್ಲಿ ಹಲವಾರು ಮಂದಿ ಅನಾರೋಗ್ಯ ಪೀಡಿತರಿಗೆ ಚಿಕಿತ್ಸೆ ನೀಡಿದ್ದೇನೆ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಸದಾ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡವರು ರೋಗ ಪೀಡಿತರಾಗಿರುವುದು ಕಡಿಮೆ ಎನ್ನುವುದು ನನ್ನ ಗಮನಕ್ಕೆ ಬಂದಿದೆ ಎಂದು ಡಾ.ಕಿಶೋರ್ ಆಳ್ವ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಭತ್ತದ ಕೃಷಿಕರೊಂದಿಗೆ
ಪತ್ರಕರ್ತರ ಸಾಮೂಹಿಕ ಭತ್ತದ ನಾಟಿ ಕಾರ್ಯಕ್ರಮ ಮಿತ್ತಳಿಕೆಗುತ್ತು ಕುಟುಂಬಸ್ಥರ ಸಹಕಾರದೊಂದಿಗೆ ಅಳಿಕೆ
ಗ್ರಾಮದ ಮಿತ್ತಳಿಕೆಯ (ಚೆಂಡುಕಳ) ಗದ್ದೆಯಲ್ಲಿ ಗುರುವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ
ಸಂಯುಕ್ತ ಆಶ್ರಯದಲ್ಲಿ ಹಮ್ಮಿ ಕೊಂಡ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಜಿಲ್ಲಾ ವಾರ್ತಾಧಿಕಾರಿ
ರವಿರಾಜ್ ಎಚ್.ಜಿ. ಅವರು ನೇಜಿ ನೆಡುವ ಮೂಲಕ ಕಾರ್ಯಕ್ರ ಮಕ್ಕೆ ಚಾಲನೆ ನೀಡಿದರು. ಮಿತ್ತಳಿಕೆ ಕುಟುಂಬದ
ಹಿರಿಯರಾದ ಸುಗಂಧ ಆರ್. ಸಾಮಾನಿ ಯವರು ದೀಪ ಬೆಳಗಿಸಿ ಸಾಂಪ್ರದಾಯಿಕ ವಾಗಿ ದೀಪ ಬೆಳಗಿಸಿ ಚಾಲನೆ ನೀಡಿದರು.
ಜಿಲ್ಲಾ ಕಾರ್ಯನಿರತ
ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ,
ತಾಲೂಕು ಸಂಘದ ಅಧ್ಯಕ್ಷ ಹರೀಶ ಮಾಂಬಾಡಿ, ಅಳಿಕೆ ಗ್ರಾ.ಪಂ ಅಧ್ಯಕ್ಷೆ ಸರಸ್ವತಿ ಕೆ., ಮಾಜಿ ಅಧ್ಯಕ್ಷ
ಪದ್ಮನಾಭ ಪೂಜಾರಿ ಸಣ್ಣಗುತ್ತು,ಮಿತ್ತಳಿಕೆ ಕುಟುಂಬದ ಹಿರಿಯರಾದ ಸಂಕಪ್ಪ ಶೆಟ್ಟಿ, ಸೀತಾರಾಮ ಶೆಟ್ಟಿ,
ಡಾ. ಕಿಶೋರ್ ಆಳ್ವ,ದಯಾನಂದ ಆಳ್ವ, ಕನ್ಯಾನ ಪಿಡಿಒ
ವಿಜಯಶಂಕರ ಆಳ್ವ, ತಿಮ್ಮಪ್ಪ ಶೆಟ್ಟಿ ಅಳಿಕೆಗುತ್ತು, ರೂಪೇಶ್ ರೈ ಅಳಿಕೆಗುತ್ತು,, ಕೇಪು
ಗ್ರಾ.ಪಂ. ಮಾಜಿ ಉಪಾಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಸದಾಶಿವ ಅಳಿಕೆ, ಸೂರ್ಯವಂಶ ಪ್ರತಿಷ್ಠಾನದ
ಡಾ.ಗೋವರ್ಧನ ರಾವ್ ಮೊದಲಾದವರು ಉಪಸ್ಥಿತರಿದ್ದರು.
ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಭಾಸ್ಕರ ರೈ ಕಟ್ಟ ಮತ್ತು ಕೋಶಾಧಿಕಾರಿ ಪುಷ್ಪರಾಜ ಬಿ.ಎನ್.
ಕಾರ್ಯಕ್ರಮ ನಿರ್ವಹಿಸಿದರು.
ಪತ್ರಕರ್ತರಿಂದ ಬೆಳೆದ
ಪೈರು ಕ್ರಷಿ ಕಾರ್ಮಿಕರಿಗೆ: ಮಿತ್ತಳಿಕೆಯ ಕುಟುಂಬದವರ ಗದ್ದೆಯಲ್ಲಿ ಪತ್ರಕರ್ತರು ಸೇರಿ ಗುರವಾರ ನಾಟಿ
ಮಾಡಿದ ಭತ್ತದ ಪೈರು ಬೆಳೆದು ಬೆಳೆ ಬಂದ ಬಳಿಕ ಅದನ್ನು ಭತ್ತದ ಕ್ರಷಿಯಲ್ಲಿ ತೊಡಗಿಸಿಕೊಂಡ ಕ್ರಷಿಕರಿಗೆ
ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಮೂಲಕ ವಿತರಣೆ ಮಾಡುವುದಾಗಿ ಮಿತ್ತಳಿಕೆ ಕುಟುಂಬದ
ಸದಸ್ಯರು ತಿಳಿಸಿದ್ದಾರೆ. ಪತ್ರಕರ್ತರು ನೇಜಿ ನೆಟ್ಟು, ಟ್ರಾಕ್ಟರ್ ಉಳುಮೆ ಮಾಡುವ ಮೂಲಕ ಕೃಷಿ ಚಟುವಟಿಕೆಗಳಲ್ಲಿ
ಪಾಲ್ಗೊಂಡರು.