ಬಡವರಿಗೆ ನೆರವಾಗಿ ಬಂಟ ಸಮಾಜದ ಋಣ ತೀರಿಸೋಣ : ಉದ್ಯಮಿ ಸದಾಶಿವ ಶೆಟ್ಟಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಡವರಿಗೆ ನೆರವಾಗಿ ಬಂಟ ಸಮಾಜದ ಋಣ ತೀರಿಸೋಣ : ಉದ್ಯಮಿ ಸದಾಶಿವ ಶೆಟ್ಟಿ

Share This

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಆರ್ಥಿಕ ನೆರವು ವಿತರಣೆ

Bunts News, ಮಂಗಳೂರು: ಒಂದು ಕಾಲದಲ್ಲಿ ಬಂಟರು ಕೃಷಿಯಲ್ಲಿ ಮಾತ್ರ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದರು ಆದರೆ ಇಂದು ಬಂಟರು ಎಲ್ಲಾ ಕ್ಷೇತ್ರಗಳಲ್ಲೂ ಇದ್ದಾರೆ. ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಹೊಟೇಲ್ ಉದ್ಯಮ, ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಬಂಟರು ಆವರಿಸಿಕೊಂಡಿದ್ದಾರೆ. ಬಂಟರು ಇಲ್ಲದ ಕ್ಷೇತ್ರಗಳಲ್ಲೇ ಇಲ್ಲ ಎಂದು ಮುಂಬಯಿಯ ಖ್ಯಾತ ಉದ್ಯಮಿ ಹೇರಂಬ ಆಗ್ರೋ ಕೆಮಿಕಲ್ಸ್ ಸಿಎಂಡಿ ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ಇವರು ನುಡಿದರು.

ಅವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ನಲ್ಲಿರುವ ಅಮೃತೋತ್ಸವ ಕಟ್ಟಡದಲ್ಲಿ ಜರಗಿದ ಸಮಾಜ ಕಲ್ಯಾಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಂಕಷ್ಟದಲ್ಲಿರುವ ಸಮಾಜ ಬಂಧುಗಳಿಗೆ ಆರ್ಥಿಕ ನೆರವು ವಿತರಿಸಿ ಮಾತನಾಡಿದರು. ಸಮಾಜದಲ್ಲಿಂದು ದೊಡ್ಡ ಸಂಖ್ಯೆಯಲ್ಲಿ ಉದ್ಯಮಿಗಳಿದ್ದಾರೆ. ತಮ್ಮ ದುಡಿಮೆಯಲ್ಲಿ ಒಂದಂಶವನ್ನು ಸಮಾಜದಲ್ಲಿರುವ ಬಡವರಿಗೆ ನೀಡಿ ಸಮಾಜದ ಋಣ ತೀರಿಸೋಣ ಎಂದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಕೆಲಸವನ್ನು ಮೆಚ್ಚಿದ  ಸದಾಶಿವ ಶೆಟ್ಟಿ ಅವರು ಒಕ್ಕೂಟಕ್ಕೆ 10 ಲಕ್ಷ ರೂಪಾಯಿಯನ್ನು ನೀಡಿ ಒಕ್ಕೂಟದ ಮಹಾ ಪೋಷಕರಾದರು.


ಸದಾಶಿವ ಶೆಟ್ಟಿ ಅವರು ಮುಂಬಾಯಿಯಲ್ಲಿ ರಾಸಾಯನಿಕ ಗೊಬ್ಬರ ಉತ್ಪಾದನೆ ಮತ್ತು ರಫ್ತು ವಹಿವಾಟು ನಡೆಸುವ ಅಂತರಾಷ್ಟ್ರೀಯ ಮಟ್ಟದ ಸಂಸ್ಥೆಯನ್ನು ಹೊಂದಿದ್ದು, ಇವರು ತನ್ನ ವಿದ್ಯಾಭ್ಯಾಸದ ಅವಧಿಯಲ್ಲಿ ಬಂಟರ ಸಂಘದ ನೆರವನ್ನು ಸ್ಮರಿಸಿ ಅಶಕ್ತ ಬಂಟ ಸಮುದಾಯದ ಸಂಕಷ್ಟಕ್ಕೆ ತನ್ನಿಂದಾದ ಸಹಾಯವನ್ನು ಮಾಡುವುದಾಗಿ ತಿಳಿಸಿ ಐಕಳ ಹರೀಶ್ ಶೆಟ್ಟಿ ಅವರ ಸಮಾಜಮುಖಿ ಚಿಂತನೆ ಕೆಲಸ ಕಾರ್ಯಗಳನ್ನು ಶ್ಲಾಘಿಸಿದರು.


ಸಮಾರಂಭದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಹಿಸಿದ್ದರು. ಸಮಾಜದಲ್ಲಿಂದು ಕೊರೊನಾದಂತಹ ಸಂಕಷ್ಟ ಕಾಲದಲ್ಲಿ ಜನರು ಬಾರೀ ಸಂಕಷ್ಟದಲ್ಲಿದ್ದಾರೆ. ಬಡ ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ಒಕ್ಕೂಟದ ಉದ್ದೇಶ. ಮಂಗಳೂರಿನಲ್ಲೂ ಬಹಳಷ್ಟು ಮಂದಿ ಉದ್ಯಮಿಗಳು ಇದ್ದಾರೆ. ಅವರು ಕೂಡಾ ಸಮಾಜದಲ್ಲಿರುವ ಬಡ ಜನರ ಕಷ್ಟಗಳಿಗೆ ಸ್ಪಂದಿಸುವಂತಾಗಲಿ ಎಂದು ತಿಳಿಸಿದರು.


ಸಮಾರಂಭದಲ್ಲಿ 11 ಮಂದಿಗೆ ವೈದ್ಯಕೀಯ ಚಿಕಿತ್ಸೆಗೆ, ಮೂರು ಮಂದಿಗೆ ಮನೆ ನಿರ್ಮಾಣಕ್ಕೆ, 13 ಮಂದಿ ಹೆಣ್ಮಕ್ಕಳ ಮದುವೆಗೆ ಆರ್ಥಿಕ ನೆರವು ವಿತರಿಸಲಾಯಿತು. ಸಮಾರಂಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜತೆ ಕಾರ್ಯದರ್ಶಿ ಸತೀಶ್ ಅಡಪ ಸಂಕಬೈಲ್, ಮಾಜೀ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಸುರೇಶ್ ಶೆಟ್ಟಿ ಪಡುಬಿದ್ರೆ, ಲೋಕಯ್ಯ ಶೆಟ್ಟಿ ಮುಂಚೂರು, ಪುಷ್ಪರಾಜ ಶೆಟ್ಟಿ ಕುಡುಂಬೂರು, ಜಗನ್ನಾಥ ಶೆಟ್ಟಿ ಬಾಳ, ದೇವಪ್ಪ ಶೇಖ, ಒಕ್ಕೂಟದ ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಕುಮಾರಿ ಸಿಂಧಿಯ ಪ್ರಾರ್ಥನೆ ಗೈದರು. ಜಯಕರ ಶೆಟ್ಟಿ ಇಂದ್ರಾಳಿ ಪ್ರಸ್ತಾವನೆ ಗೈದು ಸ್ವಾಗತಿಸಿದರು. ಸತೀಶ್ ಅಡಪ ಸಂಕಬೈಲ್ ಕಾರ್ಯಕ್ರಮ ನಿರ್ವಹಿಸಿದರು. ಸಮಾರಂಭದಲ್ಲಿ ಒಕ್ಕೂಟದ ಮಹಾಪೋಷಕರಾಗಿ ಒಕ್ಕೂಟಕ್ಕೆ 10 ಲಕ್ಷ ರೂಪಾಯಿ ದೇಣಿಗೆ ನೀಡಿದ ಸದಾಶಿವ ಶೆಟ್ಟಿ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.

Pages