ಮಂಗಳೂರು : ಮೂಳೆ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಮಾಡಿರುವ ಅಪೂರ್ವ ವೈದ್ಯಕೀಯ ಸಾಧಾನೆಗಾಗಿ ಅಂತರಾಷ್ಟ್ರೀಯ ಖ್ಯಾತಿಯ ಹಿರಿಯ ವೈದ್ಯ ಡಾ. ಎಂ. ಶಾಂತರಾಮ ಶೆಟ್ಟಿ ಅವರು ‘CME ಏಕ್ಸಲೆನ್ಸ್ ದ್ರೋಣಾಚಾರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಡಾ. ಎಂ. ಶಾಂತಾರಾಮ ಶೆಟ್ಟಿ ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ತೆಜಸ್ವಿನಿ ಆಸ್ಪತ್ರೆಯ ಅಧ್ಯಕ್ಷರಾಗಿ, ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ವೈದ್ಯಕೀಯ ಕ್ಷೇತ್ರದಲ್ಲಿನ ಸಾಧಾನೆಗಾಗಿ ಸರ್ಕಾರ ಹಾಗೂ ಅನೇಕ ಸಂಘಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಸಿದೆ.