ಮಂಗಳೂರು : ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ನೂತನ ಕಚೇರಿಯ ಉದ್ಘಾಟನಾ ಸಮಾರಂಭ ನಗರದ ಪ್ರೆಸ್‍ಕ್ಲಬ್‍ನಲ್ಲಿ ಇಂದು ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಡಾ. ಭರತ್ ಶೆಟ್ಟಿ ನೆರವೇರಿಸಿದರು.


ಈ ಸಂದರ್ಭ ಮಾತನಾಡಿದ
ಶಾಸಕ ವೇದವ್ಯಾಸ ಕಾಮತ್, ಪತ್ರಕರ್ತರಿಗೆ ಆರ್ಥಿಕವಾಗಿ ನೆರವಾಗುವಲ್ಲಿ ಸಹಕಾರ ಸಂಘವು ಪ್ರತಿ ತಾಲೂಕಿನಲ್ಲಿಯೂ
ರಚನೆಯಾಗಲಿ ಎಂದು ಶುಭ ಹಾರೈಸಿದರು. ಡಾ. ಭರತ್ ಶೆಟ್ಟಿ ಮಾತನಾಡಿ, ಸಹಕಾರಿ ಸಂಘವು ಸದೃಢವಾಗಲು ಹಣಕಾಸಿನ
ಶಿಸ್ತು ಅತೀ ಅಗತ್ಯ ಎಂದರು.
ಮುಖ್ಯ ಅತಿಥಿಯಾಗಿ
ದ.ಕ. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಕೌಶಲ್ ಪ್ರಸಾದ್ ಶೆಟ್ಟಿ ಭಾಗವಹಿಸಿದ್ದರು. ಕ್ಯಾಪ್ಟನ್
ಗಣೇಶ್ ಕಾರ್ಣಿಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ
ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ
ಮಾತನಾಡಿ ಸ್ವಾಗತಿಸಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ವಂದಿಸಿದರು. ಸಹಕಾರಿ ಸಂಘದ
ನಿರ್ದೇಶಕ ಜಿತೇಂದ್ರ ಕುಂದೇಶ್ವರ ಕಾರ್ಯಕ್ರಮ ನಿರೂಪಿಸಿದರು.