ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಖಚಿತ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದ್ದು, ಈ ಹಂತದಲ್ಲಿಯೇ ಕಟ್ಟುನಿಟ್ಟಿನ ಕ್ರಮಗಳನ್ನು ಅನುಷ್ಠಾನಗೊಳಿಸಿ, ಸಂಭಾವ್ಯ ಕೋವಿಡ್ 3ನೇ ಅಲೆಯ ಭೀತಿಯನ್ನು ತಪ್ಪಿಸಲು ನಗರವ್ಯಾಪ್ತಿಯಲ್ಲಿ ಸಮುಚಿತ ವರ್ತನೆ ಪಾಲನೆಯಾಗುತ್ತಿರುವುದರ ಬಗ್ಗೆ ನಿಗಾವಹಿಸುವುದು ಅನಿವಾರ್ಯವಾಗಿರುತ್ತದೆ.
ಈ ಹಿನ್ನೆಲೆಯಲ್ಲಿ
ದಿನಾಂಕ 01-08-2021 ರಂದು ಪಾಲಿಕೆಯ ಅಧಿಕಾರಿ/ಸಿಬ್ಬಂದಿಗಳು ವಿವಿಧ ಕಡೆಗಳಲ್ಲಿ ಕೋವಿಡ್ ಮಾರ್ಗಸೂಚಿಯನ್ನು
ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಮಾಲ್‍ಗಳು, ಶಾಪಿಂಗ್ ಕಾಂಪ್ಲೆಕ್ಸ್, ಹೋಟೆಲ್, ಸೂಪರ್ ಮಾರ್ಕೆಟ್,
ಮಾರುಕಟ್ಟೆ ಇನ್ನಿತರ ಜನನಿಬಿಡ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಲಾಗಿ, ಮಾಸ್ಕ್ ಧರಿಸದೇ ಇರುವ ಹಾಗೂ
ಸಾಮಾಜಿಕ ಅಂತರ ಕಾಪಾಡಿಕೊಳ್ಳದ ಒಟ್ಟು 25 ಪ್ರಕರಣಗಳು ಕಂಡು ಬಂದಿದ್ದು, ರೂ. 12,400 ದಂಡವನ್ನು
ವಿಧಿಸಿ ಎಚ್ಚರಿಕೆ ನೀಡಲಾಗಿದೆ. ಹಾಗೂ ಸಂಭಾವ್ಯ ಕೋವಿಡ್ 3ನೇ ಅಲೆಯನ್ನು ತಪ್ಪಿಸಲು ಸದ್ರಿ ಕಾರ್ಯಾಚರಣೆಯನ್ನು
ಇನ್ನು ಮುಂದಕ್ಕೂ ಜನನಿಬಿಡ ಪ್ರದೇಶಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ.