ಬಂಟ್ಸ್ ನ್ಯೂಸ್, ಸುರತ್ಕಲ್: ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಕೋವಿಡ್ 19 ನಿಯಮಗಳನ್ನು ಪಾಲಿಸಿ ಸುರತ್ಕಲ್ ಬಂಟರ ಭವನದಲ್ಲಿ ಸರಳವಾಗಿ ವರಮಹಾಲಕ್ಷ್ಮೀ ಪೂಜೆ ನೆರವೇರಿತು.
ಮಹಿಳಾ ವೇದಿಕೆಯ ಅಧ್ಯಕ್ಷೆ ಬೇಬಿ ನಾಗಣ್ಣ ಶೆಟ್ಟಿ ಅವರ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ ನಡೆಯಿತು. ಮಹಿಳಾ ವೇದಿಕೆಯ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.