ಆಸ್ಕರ್ ನಿಧನಕ್ಕೆ ಬಂಟರ ಯಾನೆ ನಾಡವರ ಮಾತೃ ಸಂಘ ಸಂತಾಪ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಆಸ್ಕರ್ ನಿಧನಕ್ಕೆ ಬಂಟರ ಯಾನೆ ನಾಡವರ ಮಾತೃ ಸಂಘ ಸಂತಾಪ

Share This

ಮಂಗಳೂರು : ಹಿರಿಯ ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯ, ಕೇಂದ್ರ ಮಾಜಿ ಸಚಿವ ಆಸ್ಕರ್ ಫೆರ್ನಾಂಡೀಸ್ ಅವರ ನಿಧನಕ್ಕೆ ಬಂಟರ ಯಾನೆ ನಾಡವರ ಮಾತೃಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ರಾಜಕೀಯ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಅವಿರತ ಸೇವೆಯನ್ನು ಸಲ್ಲಿಸಿರುವ ಶ್ರೀ ಆಸ್ಕರ್ ಫೆರ್ನಾಂಡೀಸ್ ಅವರು ಎಲ್ಲರೊಂದಿಗೂ ಆತ್ಮೀಯರಾಗಿ ಜನಾನುರಾಗಿಯಾಗಿದ್ದರು. ರಾಜಕೀಯ ವಲಯದಲ್ಲಿ ಅಜಾತಶತ್ರುವಾಗಿದ್ದ ಇವರ ನಿಧನದಿಂದ ಕರಾವಳಿ ಜಿಲ್ಲೆಗಳಲ್ಲದೆ, ರಾಜ್ಯ ಮತ್ತು ರಾಷ್ಟ್ರದಲ್ಲಿ ಓರ್ವ ಸರಳ ಸಜ್ಜನಿಕೆಯ ಪ್ರಾಮಾಣಿಕ ಜನನಾಯಕನನ್ನು ಕಳೆದುಕೊಂಡಂತಾಗಿದೆ.


ಇವರ ನಿಧನಕ್ಕೆ ಬಂಟರ ಯಾನೆ ನಾಡವರ ಮಾತೃಸಂಘದ ಆಡಳಿತ ಮಂಡಳಿ, ಸರ್ವ ಸದಸ್ಯರು ಹಾಗೂ ಸಮಸ್ತ ಸಮಾಜ ಬಾಂಧವರ ಪರವಾಗಿ ಸಂತಾಪ ವ್ಯಕ್ತಪಡಿಸುತ್ತೇವೆ ಎಂದು ಬಂಟರಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Pages