ಮುಂಬೈ : ಕುರ್ಲಾ ಪೂರ್ವದ ಚುನ್ನಾಭಟ್ಟಿಯಲ್ಲಿರುವ ಬಂಟರ ಭವನದ ಶ್ರೀಮತಿ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾಗೃ ಹದಲ್ಲಿ ನಡೆದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಹಿರಂಗ ಅಧಿವೇಶನದಲ್ಲಿ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಬಂಟರ ಸಂಘ ಮುಂಬಯಿ ಇದರ ಮಾಜಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಮತ್ತು ಮಾಲಿನಿ ಪದ್ಮನಾಭ್, ಎಫ್ಡಬ್ಲೂ ಬಿಎ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಮತ್ತು ಶ್ವೇತಾ ಜಯಕರ್ ದಂಪತಿಗಳನ್ನು ಸನ್ಮಾನಿಸಲಾಯಿತು. ಹಾಗೂ ಯಕ್ಷಗಾನ ಭಾಗವತ, ಪಟ್ಟ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಕರ್ನಾಟಕ ಸರಕಾರದ ಮಾಧ್ಯಮ ಅಕಾಡೆಮಿಯ ಸದಸ್ಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಮತ್ತು ಚಿತ್ರಾ ಜೆ ಶೆಟ್ಟಿ ದಂಪತಿಗಳಿಗೆ ಅತಿಥಿಗಳು ಅಭಿನಂದನಾ ಸನ್ಮಾನಗೈದು ಗೌರವಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಹಿಸಿದ್ದರು. ಬಂಟ್ಸ್ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ ಕೆ.ಶೆಟ್ಟಿ ದೀಪ ಬೆಳಗಿಸಿ ಅಧಿವೇಶನವನ್ನು ಉದ್ಘಾಟಿಸಿದರು. ಪಟ್ಲ ಸತೀಶ್ ಶೆಟ್ಟಿ ಪ್ರಾರ್ಥನೆಯನ್ನಾಡಿದರು. ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಸ್ವಾಗತಿಸಿ ಪ್ರಸ್ತಾವಿಕ ನುಡಿಗಳನ್ನಾಡಿದರು.
ಐಕಳ ಹರೀಶ್ ಅವರು ಒಕ್ಕೂಟದ ಮಹಾಪೋಷಕರು, ಪೋಷಕರು ಹಾಗೂ ಉಪಸ್ಥಿತವಿವಿಧ ಬಂಟ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಅತಿಥಿಗಳನ್ನು ಗೌರವಿಸಿದರು. ಅಶೋಕ್ ಪಕ್ಕಳ ಮತ್ತು ಕರ್ನೂರು ಮೋಹನ್ ರೈ ಕಾರ್ಯಕ್ರಮ ನಿರೂಪಿ ಸಿದರು. ಒಕ್ಕೂಟದ ಜೊತೆ ಕಾರ್ಯದರ್ಶಿ ಸತೀಶ್ ಅಡಪ ಸಂಕಬೈಲ್ ವಂದನಾರ್ಪಣೆಗೈದರು. ಒಕ್ಕೂಟದ ಮಾಜೀ ಕೋಶಾಧಿಕಾರಿ ಬಾಲಕೃಷ್ಣ ರೈ ಕೊಲ್ಲಾಡಿ ತಂಡವು ಸಿದ್ಧ ಪಡಿಸಿದ ಒಕ್ಕೂಟದ ಸೇವಾ ಸಕ್ಷ್ಯಾಚಿತ್ರ ಸಮಾರಂಭದಲ್ಲಿ ಪ್ರದರ್ಶಿಸಲ್ಪಟ್ಟಿತು.