ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ) ಮಂಗಳೂರು ಇದರ 25 ನೇ ವಾಷಿಕ ಮಹಾಸಭೆಯು ಕುರ್ಲಾ ಪೂರ್ವ ಬಂಟರ ಭವನದ ಶ್ರೀಮತಿ ರಂಜನಿ ಸುಧಾಕರ ಹೆಗ್ಡೆ ಸಮಾಜ ಕಲ್ಯಾಣ ಎನೆಕ್ಸ್ ಸಂಕೀರ್ಣದಲ್ಲಿ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಮಹಾಸಭೆಯನ್ನು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಮಹಾಸಭೆಗೆ ಚಾಲನೆ ನೀಡಿದರು.
ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಸ್ವಾಗತಿಸಿದರು. ಸಮಾರಂಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನದಾಸ ಶೆಟ್ಟಿ ಜತೆ ಕಾರ್ಯದರ್ಶಿ ಸತೀಶ ಅಡಪ ಸಂಕಬೈಲ್, ನೂತನ ನಿರ್ದೇಶಕ ಪ್ರವೀಣ್ ಭೋಜ ಶೆಟ್ಟಿ, ಬಂಟರ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಡಾ.ಆರ್. ಕೆ.ಶೆಟ್ಟಿ, ಮುಲುಂಡ್ ಬಂಟ್ಸ್ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಫಲಿಮಾರು, ಥಾಣೆ ಬಂಟ್ಸ್ ಸಂಘದ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ, ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಹಾಗೂ ವಿವಿಧ ಬಂಟರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.