ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮತ್ತು ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ ಅವರು ರಾಷ್ಟ್ರಪತಿಗಳಿಂದ ರಾಷ್ಟ್ರೀಯ ಮಟ್ಟದ ಅತ್ಯುತ್ತಮ NSS ಸ್ವಯಂಸೇವಕ ಪ್ರಶಸ್ತಿ ಪಡೆಯಲಿರುವ ಕುಮಾರಿ ಬಿಂದ್ಯಾ ಶೆಟ್ಟಿ ಅವರನ್ನು ಅಭಿನಂದಿಸಿ ಸನ್ಮಾನಿಸಿದರು.
ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ಬಿಂದಿಯಾ ಶೆಟ್ಟಿ, ಪ್ರತಿಭಾನ್ವಿತರನ್ನು ಗುರುತಿಸಿ ಗೌರವಿಸುವ ಕೆಲಸ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಾಡುತ್ತಿದೆ. ಅದರಲ್ಲೂ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ಮನೆಗೆ ಬಂದು ಗೌರವಿಸಿರುವುದು ತನ್ನ ಆತ್ಮ ವಿಶ್ವಾಸವನ್ನು ಹೆಚ್ಚಿಸಿದೆ. ಜಾಗತಿಕ ಬಂಟರ ಸಂಘಗಳ ಸಾಮಾಜಿಕ ಕಳಕಳಿಯ ಜೊತೆಗೆ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯವಾಗಿದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ತಾನು ಎಂದಿಗೂ ಚಿರ ಋಣಿಯಾಗಿರುತ್ತೇನೆ. ಅಲ್ಲದೇ ತನ್ನನ್ನು ಪ್ರತೀ ಹಂತದಲ್ಲೂ ಬೆಂಬಲಿಸಿ ಪ್ರೊತ್ಸಾಹಿಸುವ ಸುರತ್ಕಲ್ ಬಂಟರ ಸಂಘಕ್ಕೂ ಕೃತಜ್ಞತೆ ತಿಳಿಸಿದರು.
ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮಾತನಾಡಿ, ಬಿಂದಿಯಾ ಶೆಟ್ಟಿ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು, ಆಕೆ ಇನ್ನಷ್ಟು ಉತ್ತಮ ಸಾಧನೆ ಮಾಡಲಿ ಎಂದು ತಿಳಿಸಿದರು. ಈ ಸಂದರ್ಭ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಬಾಬು ಶೆಟ್ಟಿ ಮುಂಬೈ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜ, ಕೊಲ್ಲಾಡಿ ಬಾಲಕೃಷ್ಣ ಶೆಟ್ಟಿ, ಸುರೇಶ್ ಶೆಟ್ಟಿ ಪುಚ್ಚಾಡಿ, ಜೀವನ್ ಶೆಟ್ಟಿ ಮುಲ್ಕಿ, ಜಗನ್ನಾಥ ಶೆಟ್ಟಿ ಬಾಳ, ಲೋಕಯ ಶೆಟ್ಟಿ, ಪುಷ್ಪರಾಜ ಶೆಟ್ಟಿ ಕುಡುಂಬೂರು, ಪ್ರವೀಣ ಶೆಟ್ಟಿ ಸುರೇಶ್ ಶೆಟ್ಟಿ ಸೂರಿಂಜೆ, ರವಿ ಶೆಟ್ಟಿ ಜತ್ತ ಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.
ಬಿಂದಿಯಾ ಎಲ್ ಶೆಟ್ಟಿ ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ ನೀಡುವ ಅತ್ಯುತ್ತಮ ಪ್ರತಿಭಾನ್ವಿತೆಗಾಗಿ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಈಕೆ ಸುರತ್ಕಲ್ ಗೋವಿಂದ ದಾಸ ಕಾಲೇಜ್ ನ ಅಂತಿಮ ವರ್ಷದ ಬಿಕಾಂ ಪದವೀಧರೆಯಾಗಿದ್ದಾಳೆ. ಜೊತೆಗೆ ಸಿಎ ವ್ಯಾಸಾಂಗವನ್ನೂ ಮಾಡುತ್ತಿದ್ದಾಳೆ. ಬಿಂದಿಯಾ ಶೆಟ್ಟಿ ಕಟ್ಲ ಲೀಲಾಧರ ಶೆಟ್ಟಿ ಮತ್ತು ಸುಜಾತ ಶೆಟ್ಟಿ ದಂಪತಿಯ ಪುತ್ರಿಯಾಗಿದ್ದಾಳೆ. ಸೆ. 24 ರಂದು ನವದೆಹಲಿಯಲ್ಲಿ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಅವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾಳೆ