ಬಂಟ್ಸ್ ನ್ಯೂಸ್, ಮಂಗಳೂರು : ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರೀಯ ಮಟ್ಟದ ಅತ್ಯುತ್ತಮ ಸ್ವಯಂ ಸೇವಕ ಪ್ರಶಸ್ತಿಗೆ ಬಿಂದಿಯಾ ಶೆಟ್ಟಿ ಆಯ್ಕೆಯಾಗಿದ್ದಾರೆ.
ಸೆ. 24
ರಂದು ನವದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬಿಂದಿಯಾ
ಎಲ್ ಶೆಟ್ಟಿ ಸುರತ್ಕಲ್ ಅವರು ರಾಷ್ಟ್ರಪತಿ
ಅವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕಟ್ಲ ಲೀಲಾಧರ ಶೆಟ್ಟಿ
ಮತ್ರು ಸುಜಾತ ಶೆಟ್ಟಿ ದಂಪತಿಗಳ
ಪುತ್ರಿಯಾಗಿದ್ದಾಳೆ. ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿರುವ ಅವರು SSLC
ಹಾಗೂ ಪಿಯುಸಿಯಲ್ಲಿ ರಾಜ್ಯದಲ್ಲೇ ಐದನೇ ಸ್ಥಾನ ಪಡೆದಿದ್ದರು.
2019 ರಲ್ಲಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೆಡ್ ನಲ್ಲೂ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು. ಪ್ರಸ್ತುತ ಸುರತ್ಕಲ್ ಗೋವಿಂದದಾಸ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿನಿಯಾಗಿ ವ್ಯಾಸಂಗ ಮಾಡುತ್ತಿದ್ದಾರೆ.