ಬಂಟ್ಸ್ ನ್ಯೂಸ್, ಕುಂದಾಪುರ : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾದ ಹೆಮ್ಮೆಯ ಬಂಟ ಸಮಾಜದ ಸುಪುತ್ರ ದುಬೈನ ಫಾರ್ಚುನ್ ಗ್ರೂಪ್ ಆಫ್ ಹೋಟೆಲ್ಸ್ ಇದರ ಚೇರ್ಮನ್ ವಕ್ವಾಡಿ ಪ್ರವೀಣ್ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮನವಿಯಂತೆ ಒಕ್ಕೂಟದ ನಿರ್ದೇಶಕ ಸ್ಥಾನಕ್ಕೆ ನೇಮಕವಾಗಿದ್ದಾರೆ.



ಈ ಬಗ್ಗೆ ಕುಂದಾಪುರದ ಯುವ ಬಂಟರ ಸಂಘದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಕ್ವಾಡಿ ಪ್ರವೀಣ್ ಶೆಟ್ಟಿ ಅವರು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರಿಗೆ ಚೆಕ್ಕನ್ನು ಹಸ್ತಾಂತರಿಸಿದರು. ಈ ಸಂದರ್ಭ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪರವಾಗಿ ಶ್ರೀಯುತರನ್ನು ಹೃದಯಪೂರ್ವಕವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು.
ಈ ಸಂದರ್ಭ ಹಿರಿಯರಾದ ಅಪ್ಪಣ್ಣ ಹೆಗ್ಡೆ, ಸುಧಾಕರ ಶೆಟ್ಟಿ ಉತ್ತುಂಜೆ, ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ ಕಾರ್ಯದರ್ಶಿಗಳಾದ ಇಂದ್ರಾಳಿ ಜಯಕರ ಶೆಟ್ಟಿ, ಕೋಶಾಧಿಕಾರಿಗಳಾದ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು.