ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ ಅಧ್ಯಕ್ಷೆಯಾಗಿ ಚಿತ್ರಾ ಜೆ ಶೆಟ್ಟಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ ಅಧ್ಯಕ್ಷೆಯಾಗಿ ಚಿತ್ರಾ ಜೆ ಶೆಟ್ಟಿ

Share This
ಸುರತ್ಕಲ್: ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ 2021-23 ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಚಿತ್ರಾ ಜೆ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು.

ಸುರತ್ಕಲ್ ಬಂಟರ ಭವನದಲ್ಲಿ ನಡೆದ ಮಹಿಳಾ ವೇದಿಕೆಯ ಸಭೆಯಲ್ಲಿ ನೂತನ ಪದಾಧಿಕಾ ರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷೆಯಾಗಿ ಭವ್ಯಾ ಎ. ಶೆಟ್ಟಿ, ಕಾರ್ಯದರ್ಶಿಯಾಗಿ ಸರೋಜ ಟಿ ಶೆಟ್ಟಿ, ಜತೆ ಕಾರ್ಯದರ್ಶಿಯಾಗಿ ರಾಜೇಶ್ವರಿ ಡಿ ಶೆಟ್ಟಿ, ಕೋಶಾಧಿ ಕಾರಿಯಾಗಿ ಶೈಲಾ ಎಸ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಭಾರತಿ ಜಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಕೇಸರಿ ಎಸ್ ಪೂಂಜ, ಕ್ರೀಡಾ ಕಾರ್ಯದರ್ಶಿಯಾಗಿ ಅಕ್ಷತಾ ಜಿ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಮಹಿಳಾ ವೇದಿಕೆಯ ಅಧ್ಯೆಕ್ಷೆ ಬೇಬಿ ನಾಗಣ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜ ಚುನಾವಣಾ ಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಮಹಿಳಾ ವೇದಿಕೆಯ ಮಾಜೀ ಅಧ್ಯಕ್ಷರಾದ ಅಂಜನಾ ಎಂ ಶೆಟ್ಟಿ, ಮಮತಾ ಶೆಟ್ಟಿ, ಚಂದ್ರ ಕಲಾ ಶೆಟ್ಟಿ, ಉಪಾಧ್ಯೆಕ್ಷೆ ಸುಜಾತ ಶೆಟ್ಟಿ ಹೊಸಬೆಟ್ಟು ಹಾಗೂ ಮಹಿಳಾ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Pages