ಬಂಟರನ್ನು ಪ್ರವರ್ಗ 2ಎ'ಗೆ ಸೇರಿಸಲು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರಿಗೆ ಮನವಿ - BUNTS NEWS WORLD
ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ಸ್ವಾಗತ ------- ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟರನ್ನು ಪ್ರವರ್ಗ 2ಎ'ಗೆ ಸೇರಿಸಲು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರಿಗೆ ಮನವಿ

Share This
ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಬಂಟರ ಯಾನೆ ನಾಡವರ ಜಾತಿಯನ್ನು ಒಂದೇ ಎಂದು ಪರಿಗಣಿಸಿ ಹಿಂದುಳಿದ ವರ್ಗ '2 ಎ' ಅಡಿಯಲ್ಲಿ ಮೀಸಲಾತಿ ಸೌಲಭ್ಯ ದೊರಕಿಸುವಂತೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರಲ್ಲಿ ಕೋರಿದ್ದಾರೆ.

ಈ ಬಗ್ಗೆ ಒಕ್ಕೂಟದ ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿಯವರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಇದರ ಅಧ್ಯಕ್ಷರಾದ ಸನ್ಮಾನ್ಯ ಕೆ. ಜಯಪ್ರಕಾಶ್ ಹೆಗ್ಡೆಯವರನ್ನು ಅವರ ಬೆಂಗಳೂರಿನ ಗ್ರಹಕಚೇರಿಯಲ್ಲಿ ಭೇಟಿಮಾಡಿ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮನವಿ ಪತ್ರ ನೀಡಿದರು. 

ಇದಕ್ಕೆ ಸ್ಪಂದಿಸಿದ ಜಯಪ್ರಕಾಶ್ ಹೆಗ್ಡೆಯವರು ಸಂಪೂರ್ಣ ಬೆಂಬಲ ಸೂಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ತುಂಬು ಹೃದಯದಿಂದ ಭರವಸೆ ನೀಡಿದ್ದಾರೆ. 

ಮನವಿಗೆ ಸ್ಪಂದಿಸಿ ಭರವಸೆ ನೀಡಿರುವ ಜಯಪ್ರಕಾಶ್ ಹೆಗ್ಡೆ ಅವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರು, ಮಹಾಪೋಷಕರು, ಪೋಷಕರು ಹಾಗೂ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.

Pages