ಸುರತ್ಕಲ್ ಬಂಟರ ಸಂಘದ ಮಹಾಸಭೆ, ಸಾಧಕರಿಗೆ ಸನ್ಮಾನ
ಸುರತ್ಕಲ್ : ಶಿಕ್ಷಣಕ್ಕೆ ಪ್ರೋತ್ಸಾಹ, ಅರೋಗ್ಯ ಸೇವೆ, ವಸತಿ ಸೌಕರ್ಯ ಮತ್ತು ಕೃಷಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಸುರತ್ಕಲ್ ಬಂಟರ ಸಂಘ ಮುಂಬರುವ ದಿನಗಳಲ್ಲಿ ಕಾರ್ಯಕ್ರಮ ರೂಪಿಸುವುದು ಎಂದು ಜಿಲ್ಲಾ ರಾಜ್ಯೋತ್ಸವದ ಪ್ರಶಸ್ತಿ ಪುರಸ್ಕೃತ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್. ಪೂಂಜಾ ಹೊಸಬೆಟ್ಟು ಹೇಳಿದರು.







ಅವರು ಸುರತ್ಕಲ್ ಬಂಟರ ಸಂಘದ ವಾರ್ಷಿಕ ಮಹಾಸಭೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತಾಡುತ್ತಿದ್ದರು. 25ನೇ ವರ್ಷದ ಹೊಸ್ತಿಲಲ್ಲಿರುವ ಸುರತ್ಕಲ್ ಬಂಟರ ಸಂಘದ ಬೆಳ್ಳಿಹಬ್ಬದ ಸಂದರ್ಭದಲ್ಲಿ ಪ್ರತೀ ಮನೆಗೆ ಗಿಡವನ್ನು ಕೊಡುಗೆಯಾಗಿ ನೀಡುವ ಮೂಲಕ "ಮನೆಗೊಂದು ಮರ" ಕಲ್ಪನೆಯನ್ನು ಸಾಕಾರಗೊಳಿಸಲಾಗುವುದು ಎಂದು ಪೂಂಜಾ ಹೇಳಿದರು.
ರಾಜ್ಯ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾಗಿರುವ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ, ಎನ್ನೆಸ್ಸೆಸ್ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಬಿಂದಿಯಾ ಎಲ್. ಶೆಟ್ಟಿ, ಚೆನ್ನಮ್ಮ ಪ್ರಶಸ್ತಿ ಯುವರತ್ನ ಪ್ರಶಸ್ತಿ ಪುರಸ್ಕೃತ ದೀಕ್ಷಾ ಎಂ. ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಸಂಘದ ಉಪಾಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ನಿಕಟಪೂರ್ವ ಉಪಾಧ್ಯಕ್ಷ ನವೀನ್ ಶೆಟ್ಟಿ ಪಡ್ರೆ, ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ಸುರತ್ಕಲ್ , ಜೊತೆ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಮಾಜಿ ಅಧ್ಯಕ್ಷ ಎಂ. ದೇವಾನಂದ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಉಲ್ಲಾಸ್ ಆರ್. ಶೆಟ್ಟಿ ಪೆರ್ಮುದೆ, ಮಹಿಳಾ ವೇದಿಕೆ ಅಧ್ಯಕ್ಷೆ ಚಿತ್ರಾ ಜೆ. ಶೆಟ್ಟಿ, ನಿಕಟಪೂರ್ವ ಅಧ್ಯಕ್ಷೆ ಬೇಬಿ ಎನ್. ಶೆಟ್ಟಿ, ಕೋಶಾಧಿಕಾರಿ ರತ್ನಾಕರ ಶೆಟ್ಟಿ ಸುರತ್ಕಲ್ , ಕ್ರೀಡಾ ಕಾರ್ಯದರ್ಶಿ ಹರೀಶ್ ಶೆಟ್ಟಿ ಕಾಟಿಪಳ್ಳ, ಸಂಘಟನಾ ಕಾರ್ಯದರ್ಶಿ ದೇವೇಂದ್ರ ಶೆಟ್ಟಿ ಇಡ್ಯಾ ಉಪಸ್ಥಿತರಿದ್ದರು. ರಾಜೇಶ್ವರಿ ಡಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.