ಉಡುಪಿ : ಅಸಾಧ್ಯ ಎನ್ನುವಂತಾದು ಬಂಟರ ಡಿಕ್ಷನರಿಯಲ್ಲಿ ಇಲ್ಲ, ಬಂಟರು ಬಹಳ ಸ್ನೇಹಪರವಾಗಿರುವ ಜನರು, ಅತಿ ಶೀಘ್ರದಲ್ಲಿ ಸ್ನೇಹ ಸಂಪಾದಿಸಿ ಉಳಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಂಟ ಸಮಾಜವನ್ನು ಶ್ಲಾಘೀಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಅವರು ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನ ಹಾಗೂ ಕೌಶಲ್ಯ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಕಾಪು ಕ್ಷೇತ್ರದ ಶಾಸಕ ಲಾಲಾಜಿ ಮೆಂಡನ್, ಒಕ್ಕೂಟದ ನಿರ್ದೇಶಕರಾದ ಕೆ ಪ್ರಕಾಶ್ ಶೆಟ್ಟಿ, ಪುಣೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ, ಒಕ್ಕೂಟದ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಕಾರ್ಕಳ ಶಾಸಕ ಸುನಿಲ್ ಕುಮಾರ್, ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಗುರ್ಮೇ ಸುರೇಶ್ ಶೆಟ್ಟಿ, ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಸಕಾರಾಮಶೆಟ್ಟಿ, ಅಶೋಕ್ ಶೆಟ್ಟಿ ಮತ್ತಿತರ ಗಣ್ಯರು ಜೊತೆಗಿದ್ದರು.