ಮಂಗಳೂರು : ಬೆಳ್ಮಣ್ ಯುವ ಬಂಟರ ಸಂಘದ ಪದಾಧಿಕಾರಿಗಳು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ಮನೆಗೆ ಭೇಟಿ ನೀಡಿದ ಬೆಳ್ಮಣ್ಣು ಯುವ ಬಂಟರ ಸಂಘದ ಪದಾಧಿಕಾರಿಗಳಾದ ನಿರಂಜನ್ ಶೆಟ್ಟಿ, ದೀಕ್ಷಿತ್ ಶೆಟ್ಟಿ, ಹರೀಶ್ ಶೆಟ್ಟಿ, ದಿಲೀಪ್ ಶೆಟ್ಟಿ, ಮಾನ್ಯ ಶೆಟ್ಟಿ, ರೂಪಾ ಶೆಟ್ಟಿ ಹಾಗೂ ಶಾರದಾ ಇನ್ಫ್ರಾಸ್ಟ್ರಕ್ಚರ್ ಸಂಸ್ಥೆಯ ಮುಲ್ಕಿ ಜೀವನ್ ಶೆಟ್ಟಿ ಅವರೊಂದಿಗೆ ಐಕಳ ಹರೀಶ್ ಶೆಟ್ಟಿ ಅವರು ಮತ್ತು ಶ್ರೀಮತಿ ಚಂದ್ರಿಕಾ ಐಕಳ ಹರೀಶ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಿ ಗೌರವಿಸಿದರು.