ಮಂಗಳೂರು : ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕರ್ನಾಟಕ ಮಲ್ಲ ದಿನಪತ್ರಿಕೆಯ ಸಂಪಾದಕ ಚಂದ್ರಶೇಖರ ಪಾಲೆತ್ತಾಡಿ ಅವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟವು ನ. 22ರಂದು ಸನ್ಮಾನಿಸಿ ಗೌರವಿಸಿತು.
ಒಕ್ಕೂಟದ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ಚಂದ್ರಶೇಖರ ಪಾಲೆತ್ತಾಡಿ ಅವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭ ಜೊತೆ ಕಾರ್ಯದರ್ಶಿ ಸತೀಶ್ ಅಡಪ್ಪ ಸಂಕಬೈಲು, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾದ ಸುಧಾಕರ್ ಪೂಂಜಾ, ಸಾಲೆತ್ತೂರ್ ಬಂಟರ ಸಂಘದ ಅಧ್ಯಕ್ಷರಾದ ದೇವಪ್ಪ ಶೇಖ, ಅಮರೇಶ್ ಶೆಟ್ಟಿ ಸಾಲೆತ್ತೂರು, ಒಕ್ಕೂಟದ ವಿಶೇಷ ಆಹ್ವಾನಿತರಾದ ಜಗನ್ನಾಥ ಶೆಟ್ಟಿ ಬಾಳ ಮತ್ತು ಹೇಮಂತ್ ಶೆಟ್ಟಿ, ಒಕ್ಕೂಟದ ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಉದ್ಯಮಿ ಸುರೇಶ್ ಶೆಟ್ಟಿ ಯೆಯ್ಯಾಡಿ, ರವಿ ಶೆಟ್ಟಿ, ಮಾಧ್ಯಮ ಮಿತ್ರರು, ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ಸಿಬ್ಬಂದಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.