ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿ ಕ್ರೀಡಾಪಟು ಕುಮಾರಿ ಪ್ರಜ್ಞಾ ಜೆ. ಶೆಟ್ಟಿ ಇವರನ್ನು ಸನ್ಮಾನಿಸಿ ಪ್ರೋತ್ಸಾಹಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ನ. 16ರಂದು ಹಸ್ತಾಂತರಿಸಿದರು.
ಈ ಸಂದರ್ಭ ಶ್ರೀಮತಿ ಸುಜಯ ಕಾರ್ಕಳ, ಪದ್ಮನಾಭ ರೈ ಅಧ್ಯಕ್ಷರು ಬಂಟರ ಸಂಘ ಕಲ್ಲಡ್ಕ,ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಸಂತೋಷ್ ಶೆಟ್ಟಿ, ಜಯಕುಮಾರ್ ಶೆಟ್ಟಿ ಅಧ್ಯಕ್ಷರು ಯೂತ್ ಬಂಟ್ಸ್ ಮೂಡಬಿದ್ರೆ, ಸಂದೀಪ್ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ಒಕ್ಕೂಟದ ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.