ಕಿನ್ನಿಗೋಳಿ : ಮುಲ್ಕಿ ಬಂಟರ ಸಂಘದ ವಾರ್ಷಿಕ ಮಹಾಸಭೆ ಮತ್ತು ಮೂಲ್ಕಿ ಸುಂದರಾಮ್ ಶೆಟ್ಟಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುನಿಯಾಲ್ ಉದಯಕುಮಾರ್ ಶೆಟ್ಟಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ನಡೆಸಿದ ಸಮಾಜ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜದ ಅನೇಕ ಮಂದಿ ಗಳಿಗೆ ಸಹಾಯ ಆಗಿರುವ ನಿಟ್ಟಿನಲ್ಲಿ ಗೌರವಿಸಿ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಬಂಟ ಸಮಾಜದ ಧುರೀಣ ಸರ್ವ ಶ್ರೇಷ್ಠ ವ್ಯಕ್ತಿ ಶ್ರೀ ಸುಂದರ ರಾಮ್ ಶೆಟ್ಟಿ ಅವರ ಹೆಸರಿನಲ್ಲಿ ಕೊಡಮಾಡುವ ಪ್ರಶಸ್ತಿಯನ್ನು ಈ ನಾಡಿನ ಹಾಗೂ ಬಂಟ ಸಮುದಾಯದ ಹೆಸರಾಂತ ಕಲಾವಿದ ಅರುವ ಕೊರಗಪ್ಪ ಶೆಟ್ಟಿ ಅವರನ್ನು ಪ್ರಶಸ್ತಿಯೊಂದಿಗೆ ಸನ್ಮಾನಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಸಂತೋಷ್ ಹೆಗ್ಡೆ ವಹಿಸಿದ್ದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಮನೋಹರ್ ಶೆಟ್ಟಿ ಧರ್ಮದರ್ಶಿ ಶ್ರೀ ಕ್ಷೇತ್ರ ಬಪ್ಪನಾಡು, ಪುರುಷೋತ್ತಮ ಶೆಟ್ಟಿ ಉಪಾಧ್ಯಕ್ಷರು, ರವಿರಾಜ ಶೆಟ್ಟಿ ಕಾರ್ಯದರ್ಶಿ, ಶ್ರೀಮತಿ ಗೀತಾ ಶೆಟ್ಟಿ ಮಹಿಳಾ ಸಮಿತಿ ಅಧ್ಯಕ್ಷೆ, ರಾಜೇಶ್ ಶೆಟ್ಟಿ, ಸಾಯಿನಾಥ ಶೆಟ್ಟಿ ಮುಂಡ್ಕೂರ್, ದೇವಿಪ್ರಸಾದ್ ಶೆಟ್ಟಿ, ಅಶೋಕ್ ಶೆಟ್ಟಿ, ಮುರಳಿ ಭಂಡಾರಿ, ನಿಶಾಂತ್ ಶೆಟ್ಟಿ ಉಪಸ್ಥಿತರಿದ್ದರು.