ಬಂಟ್ಸ್ ನ್ಯೂಸ್, ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಡಳಿತ ಮಂಡಳಿಯ ಸದಸ್ಯರ ಸಭೆಯು ಡಿಸೆಂಬರ್ 23 ರಂದು ಗುರುವಾರ ಬೆಳಿಗ್ಗೆ 10 ಗಂಟೆಗೆ ಬಂಟ್ಸ್ ಹಾಸ್ಟೇಲ್ ಬಳಿಯ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರಗಲಿದೆ.
ಸಭೆಯ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಹಿಸಲಿದ್ದಾರೆ. ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪತ್ರಕರ್ತರಾದ ಭಾಸ್ಕರ ರೈ ಕಟ್ಟ, ಲೀಲಾಕ್ಷಿ ಬಿ. ಕರ್ಕೇರಾ, ಶರತ್ ಶೆಟ್ಟಿ ಕಿನ್ನಿಗೋಳಿ, ನವೀನ್ ಶೆಟ್ಟಿ ಎಡ್ಮೆಮಾರ್, ಆರ್. ಜೆ. ನಯನಾ ಶೆಟ್ಟಿ, ಕುಮಾರಿ ಸ್ಪೂರ್ತಿ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು.
ಬಳಿಕ ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ವೈದ್ಯಕೀಯ, ಹೆಣ್ಣು ಮಕ್ಕಳ ವಿವಾಹಕ್ಕೆ ಸಹಾಯ, ವಸತಿ ಸಹಾಯ ಹಸ್ತ ಹಾಗೂ ಇನ್ನಿತರ ಕಷ್ಟದಲ್ಲಿರುವ ಕುಟುಂಬಗಳಿಗೆ ನೆರವು ನೀಡಲಾಗುವುದು ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.