ಮಂಗಳೂರು : ಭಾರತದ ಬಾಸ್ಕೆಟ್ ಬಾಲ್ ತಂಡದ ಸದಸ್ಯನಾಗಿ ಅತ್ಯುತ್ತಮ ಪ್ರದರ್ಶನ ನೀಡಿ ಇತ್ತೀಚೆಗೆ ಬಂಗಾರದ ಪದಕವನ್ನು ಭಾರತ ದೇಶಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ ಶಶಿಕಾಂತ್ ರೈ ಅವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಮಂಗಳೂರಿನ ಒಕ್ಕೂಟದ ಕಾರ್ಯಾಲಯದಲ್ಲಿ ಫಲಪುಷ್ಪ ಬೆಳ್ಳಿಯ ಗಣಪತಿ ವಿಗ್ರಹವನ್ನು ನೀಡಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ್ ಪೂಂಜಾ, ಶಶಿಕಾಂತ್ ಅವರ ತಾಯಿ, ಅವಿಕ್ಷಿತ ರೈ, ಒಕ್ಕೂಟದ ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.