ನಟ ಪುನೀತ್ ರಾಜ್‌ಗೆ ಗೀತ ನಮನ ಕಾರ್ಯಕ್ರಮ, ಡಿ.25 : ಸುರತ್ಕಲ್ ಬಂಟರ ಭವನದಲ್ಲಿ
ಸುರತ್ಕಲ್ : ರಂಗಚಾವಡಿ ಮಂಗಳೂರು ಇದರ ಆಶ್ರಯದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ಡಿಸೆಂಬರ್ 25 ಶನಿವಾರ ಸಂಜೆ 4 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.
ವರ್ಷದ ಹಬ್ಬ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ 2021ರ ಸಾಲಿನ ರಂಗಚಾವಡಿ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ನಟ ಪುನೀತ್‌ರಾಜ್‌ಗೆ ಗೀತ ನಮನ ಕಾರ್ಯಕ್ರಮ ಗಿರೀಶ್ ಸಾಗರ ಮತ್ತು ಬಳಗದವರಿಂದ ನಡೆಯಲಿದೆ.
ಕಾರ್ಯಕ್ರಮವನ್ನು ಎಂಆರ್‌ಜಿ ಗ್ರೂಪ್‌ನ ಸ್ಥಾಪಕಾಧ್ಯಕ್ಷರಾದ ಕೆ. ಪ್ರಕಾಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಡಾ. ವೈ ಭರತ್ ಶೆಟ್ಟಿ, ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಜಾಗತಿಕ ಬಂಟ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಸಿಎ ಸುಧೀರ್ ಕುಮಾರ್ ಶೆಟ್ಟಿ, ಚಲನಚಿತ್ರ ನಿರ್ಮಾಪಕ ಡಾ ಸಂಜೀವ ದಂಡೆಕೇರಿ ಉದ್ಯಮಿ ಯಾದವ ಕೋಟ್ಯಾನ್ ಪೆರ್ಮುದೆ, ಥಾಣೆ ಬಂಟರ ಸಂಘದ ಅಧ್ಯಕ್ಷ ವೇಣುಗೋಪಾಲ ಎಲ್ ಶೆಟ್ಟಿ, ದ.ಕ ಜಿಲ್ಲಾ ಕಾರ್ಯನಿರತ ಪರ್ತಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ಉದ್ಯಮಿ ರಮಾನಾಥ್ ಶೆಟ್ಟಿ ಬೈಕಂಪಾಡಿ, ಲಕುಮಿ ರಂಗ ತಂಡದ ಸಂಚಾಲಕ ಕಿಶೋರ್ ಡಿ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್ ಪೂಂಜಾ, ಕ್ಯಾಟ್ಕದ ಅಧ್ಯಕ್ಷ ಮೋಹನ್ ಕೊಪ್ಪಲ, ಹಿರಿಯ ರಂಗಕರ್ಮಿ ವಿ.ಜಿ ಪಾಲ್ ಮೊದಲಾದವರು ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು, ರೂಪೇಶ್ ಶೆಟ್ಟಿ, ಪ್ರಸನ್ನ ಶೆಟ್ಟಿ ಬೈಲೂರು, ನಿರೀಕ್ಷಾ ಶೆಟ್ಟಿ, ಶಿಫಾಲಿ ಮಂಗಳೂರು ಮೊದಲಾದವರು ಆಗಮಿಸಲಿದ್ದಾರೆ. ನವೀನ್ ಶೆಟ್ಟಿ ಎಡ್ಮೆಮಾರ್ ಅಭಿನಂದನಾ ಭಾಷಣಗೈಯಲಿದ್ದು, ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರ್ವಹಿಸಲಿದ್ದಾರೆ ಎಂದು ರಂಗಚಾವಡಿಯ ಪ್ರಕಟಣೆ ತಿಳಿಸಿದೆ.