ಬೋಂಬೆ ಬಂಟ್ಸ್ ಅಸೋಷಿಯೇಶನಿನ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಸರಳ ಬಿ. ಶೆಟ್ಟಿ ನಿಧನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬೋಂಬೆ ಬಂಟ್ಸ್ ಅಸೋಷಿಯೇಶನಿನ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಸರಳ ಬಿ. ಶೆಟ್ಟಿ ನಿಧನ

Share This
ಮುಂಬಯಿ : ಮಹಾರಾಷ್ಟ್ರದ ಅತ್ಯುನ್ನತ ಕ್ರೀಡಾ ಪ್ರಶಸ್ತಿ ಚತ್ರಪತಿ ಶಿವಾಜಿ ಮಹಾರಾಜ ಪ್ರಶಸ್ತಿಯನ್ನು ಎರಡು ಬಾರಿ ಸ್ವಿಕರಿಸಿದ ಮತ್ತು , ದಾದೋಜಿ ಕೊಂಡದೇವ್ ಪ್ರಶಸ್ತಿ ವಿಜೇತೆ ವೈಟ್ ಲಿಪ್ಟಿಂಗ್ ನಲ್ಲಿ ದೇಶ ವಿದೇಶಗಳಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ ಬಂಟ ಸಮಾಜದ ಖ್ಯಾತ ಮಹಿಳಾ ಕ್ರೀಡಾ ಪಟು ಬೋಂಬೆ ಬಂಟ್ಸ್ ಅಸೋಷಿಯೇಶನಿನ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಹಾಗೂ ಶಿಕ್ಷಣ ಸಮಿತಿಯ ಮಾಜಿ ಕಾರ್ಯಾಧ್ಯಕ್ಷೆ ಪ್ರಸ್ತುತ ಕ್ರೀಡಾ ವಿಭಾಗದ ಕಾರ್ಯಾಧ್ಯಕ್ಷೆ ಯಾಗಿ ಸೇವೆ ಸಲ್ಲಿಸುತ್ತಿದ್ದ ಸರಳ ಬಾಲಕೃಷ್ಣ ಶೆಟ್ಟಿ (64) ಯವರು ಹೃದಯಘಾತದಿಂದಾಗಿ ಡಿ. 19 ರಂದು ಘಾಟ್ಕೊಪರ ಪಶ್ಚಿಮದ ದಾಮೋದರ ಪಾರ್ಕಿನ ಸ್ವಾಗತ್ ಸೊಸೈಟಿಯ ಸ್ವಗೃಹದಲ್ಲಿ ನಿಧನಹೊಂದಿದರು.
ಮೂಲತ ಕಾರ್ಕಳದ ಬೇಲಾಡಿ ಪ್ರತಿಷ್ಟಿತ ಬಂಟ ಮನೆತನ ಶೆಟ್ಟಿಬೆಟ್ಟು ಪರಾಡಿ ಮನೆತನದವರಾದಿದ್ದರು. ಪತಿ ಬಾಲಕೃಷ್ನ ಶೆಟ್ಟಿ, ಪುತ್ರ ಗೋ ಏರ್ ನ ಫೈಲಟ್ ಸೌರಭ್ ಬಿ. ಶೆಟ್ಟಿ ಮತ್ತು ಮೂವರು ಸೋದರಿಯರು ಹಾಗೂ ಅಪಾರ ಅಭಿಮಾನಿಗಳನ್ನುಅಗಲಿದ್ದಾರೆ.

ಇವರ ನಿಧನಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು, ಬೋಂಬೆ ಬಂಟ್ಸ್ ಅಸೋಷಿಯೇಶನಿನ ಅಧ್ಯಕ್ಷರಾದ ಮುರುಳಿ ಕೆ. ಶೆಟ್ಟಿ, ಉಪಾಧ್ಯಕ್ಷ ಸಿಎ ಸುರೇಂದ್ರ ಕೆ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುನಿಲ್ ಶೆಟ್ಟಿ, ಕೋಶಾಧಿಕಾರಿ ಸಿಎ ವಿಶ್ವನಾಥ ಶೆಟ್ಟಿ, ಜೊತೆ ಕಾರ್ಯದರ್ಶಿ ಶಂಕರ ಶೆಟ್ಟಿ ಮುಳೂಂಡ್, ಜೊತೆ ಕೋಶಾಧಿಕಾರಿ ಶಾಂ ಸುಂದರ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಗೋಪಾಲ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಶಶಿಕಾಂತ ರೈ, ಮಾಜಿ ಅಧ್ಯಕ್ಷರುಗಳು ಮತ್ತು ಟ್ರಷ್ಟಿಗಳು, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯರು, ಕ್ರೀಡಾ ವಿಭಾಗದ ಸಂಚಾಲಕ ಸುರೇಶ್ ಶೆಟ್ಟಿ ಯೆಯ್ಯಾಡಿ ಹಾಗೂ ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಚಂದ್ರಹಾಸ ಕೆ ಶೆಟ್ಟಿ, ಹಾಗೂ ಪದಾಧಿಕಾರಿಗಳು ಮುಳೂಂಡ್ ಬಂಟ್ಸ ನ ಅಧ್ಯಕ್ಷರಾದ ವಸಂತ್ ಶೆಟ್ಟಿ ಪಲಿಮಾರು ಮತ್ತು ಪದಾಧಿಕಾರಿಗಳೂ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷರಾದ ಅಶೋಕ ಅಡ್ಯಂತಾಯ, ಬೇಲಾಡಿ, ಥಾನೆ ಬಂಟ್ಸನ ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿ ಮತ್ತು ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

Pages