ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ವರ್ಷಕ್ಕೆ 50 ಲಕ್ಷ ರೂ. ದಾನ ನೀಡುವೆ : ಉದ್ಯಮಿ ಸದಾಶಿವ ಶೆಟ್ಟಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ವರ್ಷಕ್ಕೆ 50 ಲಕ್ಷ ರೂ. ದಾನ ನೀಡುವೆ : ಉದ್ಯಮಿ ಸದಾಶಿವ ಶೆಟ್ಟಿ

Share This
ಬಂಟ್ಸ್ ನ್ಯೂಸ್, ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಉತ್ತಮ ಸಮಾಜಮುಖಿ ಕೆಲಸ ಮಾಡುತ್ತಿದ್ದು ಒಕ್ಕೂಟದ ಸಮಾಜ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಪ್ರತಿ ವರ್ಷವೂ 50 ಲಕ್ಷ ರೂ. ದಾನ ನೀಡುವುದಾಗಿ ಹೇರಂಬ ಆಗ್ರೋ ಕೆಮಿಕಲ್ ಸಿಎಂಡಿ , ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕ ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ಹೇಳಿದರು.
ಅವರು ಡಿ. 23ರಂದು ಬಂಟ್ಸ್ ಹಾಸ್ಟೇಲ್ ಬಳಿಯ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರುಗಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಡಳಿತ ಮಂಡಳಿ ಸಭೆ, ಸಾಧಕರಿಗೆ ಸನ್ಮಾನ ಹಾಗೂ ಸಮಾಜ ಕಲ್ಯಾಣ ಕಾರ್ಯಕ್ರಮದ ಮೂಲಕ ಫಲಾನುಭವಿಗಳಿಗೆ ಚೆಕ್ ವಿತರಣಾ ಸಮಾರಂಭದ ಮುಖ್ಯ ಅತಿಥಿಯಾಗಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನಮಗೆ ಸಮಾಜ ಸೇವೆ ಮಾಡಲು ಮನಸ್ಸಿದೆ. ಆದರೆ ಉದ್ಯಮದ ಜಂಜಾಟದಲ್ಲಿ ಎಲ್ಲವನ್ನೂ ಪರಿಶೀಲಿಸಿ ಮಾಡಲು ಸಾಧ್ಯವಿಲ್ಲ. ಐಕಳ ಹರೀಶ್ ಶೆಟ್ಟಿ ಸಾರಥ್ಯದಲ್ಲಿ ಒಕ್ಕೂಟವು ಸೂಕ್ತ ರೀತಿಯಲ್ಲಿ ಸಮಾಜಮುಖಿ ಕಾರ್ಯ ಮಾಡುತ್ತಿದ್ದು ನಮ್ಮಿಂದಾಗುವ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. 

ಮುಂದಿನ ದಿನಗಳಲ್ಲಿ ಒಕ್ಕೂಟವು ತನ್ನದೇ ಆದ ಭೂಮಿ ಖರೀದಿಸಿ ಕಟ್ಟಡ ನಿರ್ಮಾಣ ಮಾಡುವುದಿದ್ದರೆ ಅದಕ್ಕೂ ಹೆಚ್ಚಿನ ಸಹಾಯ ಮಾಡುವುದಾಗಿ ತಿಳಿಸಿದರು. 

ಸಭೆಯ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಹಿಸಿದ್ದರು. ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪತ್ರಕರ್ತರಾದ ಭಾಸ್ಕರ ರೈ ಕಟ್ಟ, ಲೀಲಾಕ್ಷಿ ಬಿ. ಕರ್ಕೇರಾ, ಶರತ್ ಶೆಟ್ಟಿ ಕಿನ್ನಿಗೋಳಿ, ನವೀನ್ ಶೆಟ್ಟಿ ಎಡ್ಮೆಮಾರ್, ಆರ್. ಜೆ. ನಯನಾ ಶೆಟ್ಟಿ, ಕುಮಾರಿ ಸ್ಪೂರ್ತಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. 

ಸಮಾರಂಭದಲ್ಲಿ ಸಮಾಜ ಕಲ್ಯಾಣ ಯೋಜನೆಯಡಿ ಒಟ್ಟು 68 ಮಂದಿಗೆ 11 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್‍ನ್ನು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಿತರಿಸಿದರು. ವೈದ್ಯಕೀಯ, ಮದುವೆ, ಶಿಕ್ಷಣ, ದತ್ತು ಸ್ವೀಕಾರ, ಮನೆರಿಪೇರಿ ಮತ್ತು ಮನೆ ನಿರ್ಮಾಣಕ್ಕೆ ಫಲಾನುಭವಿಗಳಿಗೆ ಚೆಕ್‍ನ್ನು ನೀಡಲಾಯಿತು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ, ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ, ಸಮಾರಂಭದಲ್ಲಿ ಒಕ್ಕೂಟದ ಪೋಷಕ, ಉದ್ಯಮಿ ಮುನಿಯಾಲು ಉದಯಕುಮಾರ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನ್‍ದಾಸ ಶೆಟ್ಟಿ, ಜತೆ ಕಾರ್ಯದರ್ಶಿ ಸತೀಶ್ ಅಡಪ ಸಂಕಬೈಲು, ಒಕ್ಕೂಟದ ಪೋಷಕರಾದ ಥಾಣೆ ಬಂಟರ ಸಂಘದ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ, ಮೂಡುಶೆಡ್ಡೆ ವಿಶ್ವನಾಥ ಶೆಟ್ಟಿ ಉಪಸ್ಥಿತರಿದ್ದರು.

ಕರ್ನಿರೆ ವಿಶ್ವನಾಥ ಶೆಟ್ಟಿ ಸ್ವಾಗತಿಸಿದರು. ಜಯಕರ ಶೆಟ್ಟಿ ಇಂದ್ರಾಳಿ ಪ್ರಸ್ತಾವನೆಗೈದರು. ಸತೀಶ್ ಅಡಪ ಸಂಕಬೈಲು ವಂದಿಸಿದರು. ಪಟ್ಲ ಸತೀಶ್ ಶೆಟ್ಟಿ ಪ್ರಾರ್ಥನೆಗೈದರು.

Pages