ಮಂಗಳೂರು : ಮೂಡಬಿದ್ರೆ ಆಳ್ವಾಸ್ ಪದವಿ ಪೂರ್ವ ಕಾಲೇಜು ಕನ್ನಡ ಉಪನ್ಯಾಸಕಿ ಸುಧಾರಾಣಿ ಅವರ ಸಂಶೋಧನ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿ.ಎಚ್.ಡಿ ಪದವಿ ನೀಡಿದೆ.
ಮಂಗಳೂರು ವಿವಿ ಎಸ್.ವಿ.ಪಿ. ಅಧ್ಯಯನ ಸಂಸ್ಥೆಯ ಸಹ ಪ್ರಾಧ್ಯಾಪಕ ಹಾಗೂ ಅಂಬಿಗರ ಚೌಡಯ್ಯ ಅಧ್ಯಯನ ಪೀಠದ ಸಂಯೋಜಕ ಡಾ. ನಾಗಪ್ಪ ಗೌಡ ಆರ್. ಮಾರ್ಗದರ್ಶನದಲ್ಲಿ ಸುಧಾರಾಣಿ ಅವರು ತುಳು ಅನುವಾದ ವಾಙ್ಮಯ ಸಾಂಸ್ಕೃತಿಕ ಅನುಸಂಧಾನದ ನೆಲೆಗಳು ಎಂಬ ಸಂಶೋಧನಾ ಮಹಾಪ್ರಬಂಧ ಮಂಡಿಸಿದ್ದರು.