ಅರಂತಬೆಟ್ಟು ಮುಂಚೂರು ಶ್ರೀ ಕೋಡ್ದಬ್ಬು ದೈವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಶೆಟ್ಟಿ ಮುಂಚೂರು ಆಯ್ಕೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಅರಂತಬೆಟ್ಟು ಮುಂಚೂರು ಶ್ರೀ ಕೋಡ್ದಬ್ಬು ದೈವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಶೆಟ್ಟಿ ಮುಂಚೂರು ಆಯ್ಕೆ

Share This
ಸುರತ್ಕಲ್ : ಅರಂತಬೆಟ್ಟು -ಮುಂಚೂರು ಶ್ರೀ ಕೋಡ್ದಬ್ಬು ದೈವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷರಾಗಿ ಸತೀಶ ಶೆಟ್ಟಿ ಕೆಳಗಿನ ಮನೆ ಮುಂಚೂರು ಆಯ್ಕೆಯಾಗಿದ್ದಾರೆ.
ಸೇವಾ ಸಮಿತಿಯ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಮಿತಿಯ ಗೌರವಾಧ್ಯಕ್ಷರಾಗಿ ಸುಭಾಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಲೋಕಯ್ಯ ಶೆಟ್ಟಿ ಮುಂಚೂರು, ಕೋಶಾಧಿಕಾರಿಯಾಗಿ ಸೀತಾರಾಮ ಪೂಜಾರಿ ಆಯ್ಕೆಯಾದರು. ಸೇವಾಸಮಿತಿಯ ಪೂರ್ವಾಧ್ಯಕ್ಷರಾದ ಭೋಜ ಶೆಟ್ಟಿ ಮುಂಚೂರು, ಸದಾನಂದ ಎಸ್, ಮೊದಲಾದವರು ಉಪಸ್ಥಿತರಿದ್ದರು.

ವಾರ್ಷಿಕ‌ ನೇಮೋತ್ಸವ : ಅರಂತಬೆಟ್ಟು- ಮುಂಚೂರು ಶ್ರೀ ಕೋಡ್ದಬ್ಬು ದೈವಸ್ಥಾನದಲ್ಲಿ ಶ್ರೀ ಕೋಡ್ದಬ್ಬು, ತನ್ನಿಮಾನಿಗ ಹಾಗೂ ಧೂಮಾವತಿ ಬಂಟ ದೈವಗಳ ವಾರ್ಷಿಕ ನೇಮೋತ್ಸವ ಜನವರಿ 25 ರಂದು ಜರಗಲಿದೆ.

ಅಂದು ಬೆಳಿಗ್ಗೆ 7 ಕ್ಕೆ ಗಣಹೋಮ, ಸಂಜೆ 6 ಕ್ಕೆ ದೈವಗಳ ಭಂಡಾರ ಆಗಮನ, ರಾತ್ರಿ 7 ರಿಂದ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ 9 ರಿಂದ ದೈವಗಳಿಗೆ ನೇಮೋತ್ಸವ ನಡೆಯಲಿದೆ.

Pages