ನುಡಿದಂತೆ ನಡೆವ ಬಂಟರ ಧೀಮಂತ ವ್ಯಕ್ತಿ : ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ 50 ಲಕ್ಷ ರೂ. ನೀಡಿದ ಉದ್ಯಮಿ ಸದಾಶಿವ ಕೆ ಶೆಟ್ಟಿ ಕೂಳೂರು ಕನ್ಯಾನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ಸ್ವಾಗತ------- ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ನುಡಿದಂತೆ ನಡೆವ ಬಂಟರ ಧೀಮಂತ ವ್ಯಕ್ತಿ : ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ 50 ಲಕ್ಷ ರೂ. ನೀಡಿದ ಉದ್ಯಮಿ ಸದಾಶಿವ ಕೆ ಶೆಟ್ಟಿ ಕೂಳೂರು ಕನ್ಯಾನ

Share This
ಬಂಟ್ಸ್ ನ್ಯೂಸ್, ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿರುವ ಸದಾಶಿವ ಕೆ ಶೆಟ್ಟಿ ಕೂಳೂರು ಕನ್ಯಾನ ಅಧ್ಯಕ್ಷರು ಹೇರಂಬ ಇಂಡಸ್ಟ್ರೀಸ್ ಲಿಮಿಟೆಡ್ ಮುಂಬೈ ಇವರು ಒಕ್ಕೂಟದ ಸಮಾಜ ಕಲ್ಯಾಣ ಕಾರ್ಯಕ್ರಮಗಳಿಗೆ ತನ್ನ ಮಾತಿನಂತೆ ಕಳೆದ 21- 22 ನೇ ಸಾಲಿನ 50 ಲಕ್ಷ ರೂಪಾಯಿಗಳ ಅನುದಾನದ ಚೆಕ್ಕನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರಿಗೆ ಹಸ್ತಾಂತರಿಸಿದರು.

ಅಲ್ಲದೆ ಒಕ್ಕೂಟದ ಸ್ಥಳ ಖರೀದಿ ಮತ್ತು ಕಟ್ಟಡ ರಚನೆಗೆ ತಮ್ಮ ಸಹಾಯ ಹಸ್ತವನ್ನು ಒದಗಿಸುವುದಾಗಿ ಈ ವೇಳೆ ಭರವಸೆಯನ್ನು ನೀಡಿದರು. ಒಕ್ಕೂಟದ ಸರ್ವತೋಮುಖ ಅಭಿವೃದ್ಧಿಗೆ ನಿಮ್ಮೊಡನೆ ನಾನಿದ್ದೇನೆ ಎನ್ನುವ ಸಮಾಜಮುಖಿ ಚಿಂತನೆಯೊಂದಿಗೆ ಶ್ರೀಯುತರ ಸೇವೆ ಬಂಟ ಸಮಾಜದಲ್ಲಿ ನವ ಚೈತನ್ಯವನ್ನು ತುಂಬಲು ಯಶಸ್ವಿಯಾಗಲಿ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಶುಭ ಹಾರೈಸುತ್ತದೆ.

ಒಕ್ಕೂಟದ ಸಮಾಜ ಕಲ್ಯಾಣ ಕಾರ್ಯಕ್ರಮಗಳಿಗಾಗಿ 50 ಲಕ್ಷ ರೂ. ದೇಣಿಗೆ ನೀಡಿದ ಸದಾಶಿವ ಶೆಟ್ಟಿ ಅವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನದಾಸ ಶೆಟ್ಟಿ, ಜತೆ ಕಾರ್ಯದರ್ಶಿ ಸಂಕಬೈಲ್ ಸತೀಶ್ ಅಡಪ್ಪ, ನಿರ್ದೇಶಕರು, ಮಹಾಪೋಷಕರು, ಪೋಷಕರು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸರ್ವ ಸದಸ್ಯರು ಕೃತಜ್ಞತೆ ಸಲ್ಲಿಸುತ್ತದೆ.

Pages