ಬಂಟ್ಸ್ ನ್ಯೂಸ್, ಮಂಗಳೂರು : ಜಾಗತಿಕ ಬಂಟರ ಸಂಘದ ಸಹಕಾರದಲ್ಲಿ ಮೂಲ್ಕಿ ತಾಲೂಕಿನ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ನಡುಗೋಡು ಕಜೆಮಾರು ನಿವಾಸಿ ರಂಜಿತ್ ಶೆಟ್ಟಿ ಅವರಿಗೆ ಮನೆ ನಿರ್ಮಾಣ ಮಾಡಲಾಗಿದ್ದು, ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಭೇಟಿ ನೀಡಿ ಮನೆ ಹಸ್ತಾಂತರಿಸಿದರು.
ಈ ಸಂದರ್ಭ ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಪುರುಶೋತ್ತಮ ಶೆಟ್ಟಿ, ಕಟೀಲು ಪಂಚಾಯತ್ ಮಾಜಿ ಸದಸ್ಯ ತಿಲಕ್ ರಾಜ್ ಶೆಟ್ಟಿ, ರಂಜಿತ್ ಶೆಟ್ಟಿ, ರವೀಂದ್ರ ಶೆಟ್ಟಿ, ಸ್ಮೀತಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.