ಫೆ. 13ರಂದು ಸುರತ್ಕಲ್ ಬಂಟರ ಸಂಘದ ಕ್ರೀಡೋತ್ಸವ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಫೆ. 13ರಂದು ಸುರತ್ಕಲ್ ಬಂಟರ ಸಂಘದ ಕ್ರೀಡೋತ್ಸವ

Share This
ಬಂಟ್ಸ್ ನ್ಯೂಸ್, ಸುರತ್ಕಲ್: ಬಂಟರ ಸಂಘ(ರಿ) ಸುರತ್ಕಲ್ ಮತ್ತು ಬಂಟರ ಯಾನೆ ನಾಡವರ ಮಾತೃ ಸಂಘ(ರಿ) ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ) ಇವರ ಸಹಯೋಗದೊಂದಿಗೆ ನಡೆಯುವ ಬಂಟರ ಕ್ರೀಡೋತ್ಸವ ಫೆಬ್ರವರಿ 13 ರಂದು ಭಾನುವಾರ ಸುರತ್ಕಲ್ ಗೋವಿಂದ ದಾಸ ಕಾಲೇಜ್ ಕ್ರೀಡಾಂಗಣದಲ್ಲಿ ಬೆಳಿಗ್ಗೆ 8.30 ಕ್ಕೆ ನಡೆಯಲಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಬಂಟರ ಕ್ರೀಡೋತ್ಸವವನ್ನು ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಸುಧಾಕರ ಎಸ್ ಪೂಂಜಾ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಬಂಟರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನದಾಸ ಶೆಟ್ಟಿ ಭಾಗವಹಿಸಲಿದ್ದಾರೆ.

ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ, ಅಂತರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲು ಅವರನ್ನು ಸನ್ಮಾನಿಸಲಾಗುವುದು. ಸಂಜೆ 5 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬಂಟರ ಮಾತೃ ಸಂಘದ ಕೋಶಾಧಿಕಾರಿ ಕೃಷ್ಣ ಪ್ರಸಾದ್ ರೈ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಬಂಟರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ಸಹ ಸಂಚಾಲಕ ಮುರಳೀಧರ ಶೆಟ್ಟಿ ಎಡಪದವು, ಒಕ್ಕೂಟದ ಜತೆ ಕಾರ್ಯದರ್ಶಿ ಸತೀಶ್ ಅಡಪ ಸಂಕಬೈಲ್, ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಯುವ ವಿಭಾಗದ ಅಧ್ಯಕ್ಷ ದೇವಿಚರಣ್ ಶೆಟ್ಟಿ, ಕಾರ್ಪೋರೇಟರ್ ವರುಣ್ ಚೌಟ, ವಿಜಯ ಬ್ಯಾಂಕ್‍ನ ನಿವೃತ್ತ ಪ್ರಬಂಧಕ ಎನ್. ಅಶೋಕ ಕುಮಾರ್ ಶೆಟ್ಟಿ ಸುರತ್ಕಲ್, ಸತೀಶ್ ಶೆಟ್ಟಿ ಕೆಳಗಿನ ಮನೆ ಮುಂಚೂರು ಮೊದಲಾದವರು ಭಾಗವಹಿಸಲಿದ್ದಾರೆ. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್. ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ.

ವಯೋಮಿತಿ ಆಧಾರದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದೆ. ಹಗ್ಗ ಜಗ್ಗಾಟ, ವಾಲಿಬಾಲ್, ತ್ರೋಬಾಲ್ ಪಂದ್ಯಾಟದ ಜತೆಗೆ ಮಕ್ಕಳಿಗೂ ವಿವಿಧ ಸ್ಫರ್ಧೆಗಳು ನಡೆಯಲಿದೆ. ಬೆಳಿಗ್ಗೆ 8.30ಕ್ಕೆ ಗ್ರಾಮವಾರ ಪಥಸಂಚಲನ ನಡೆಯಲಿದೆ ಎಂದು ಕ್ರೀಡಾ ಕಾರ್ಯದರ್ಶಿ ಹರೀಶ್ ಕೆ. ಶೆಟ್ಟಿ ತಿಳಿಸಿದ್ದಾರೆ.

Pages