ಮಂಗಳೂರು : ನಗರದಲ್ಲಿ ಮೊಬೈಲ್ ಮತ್ತಿತರ ವಸ್ತುಗಳನ್ನು ಕದಿಯಲು ಪ್ರಯತ್ನಿಸಿ ಪರಾರಿಯಾಗಲು ಯತ್ನಿಸುವ ಸಂದರ್ಭ ಕರ್ತವ್ಯದಲ್ಲಿದ್ದ ವರುಣ್ ಆಳ್ವ ಅವರು ಕಳ್ಳನನ್ನು ಬೆನ್ನಟ್ಟಿ ಹಿಡಿದು ಹೆಡೆಮುರಿ ಕಟ್ಟಿ ಬಂಧಿಸುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ವರುಣ್ ಅವರು ಕಳ್ಳನನ್ನು ಹಿಡಿಯಲು ದೂರದವರೆಗೆ ಓಡಿ ಹಿಡಿಯುವ ವಿಡಿಯೋ ವೈರಲ್ ಆಗಿದ್ದು ಎಲ್ಲೆಡೆ ಮೆಚ್ಚುಗೆಯ ಮಾತುಗಳು ವ್ಯಕ್ತವಾಗುತ್ತಿದೆ.
ಅಲ್ಲದೆ ವರುಣ್ ಆಳ್ವ ಅವರು ಆರೋಪಿಗಳನ್ನು ಪತ್ತೆ ಹಚ್ಚಿ ಅವರಲ್ಲಿದ್ದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದರು. ವರುಣ್ ಆಳ್ವರ ಈ ಕಾರ್ಯಕ್ಕೆ ಮಂಗಳೂರು ಕಮೀಷನರ್ ಎನ್. ಶಶಿಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿ ಅವರ ಕಚೇರಿಯಲ್ಲಿ ಅಭಿನಂದಿಸಿದ್ದಾರೆ.