ರೂಪೇಶ್ ಶೆಟ್ಟಿ ನಿರ್ದೇಶನದ ಸರ್ಕಸ್ ತುಳು ಸಿನಿಮಾ ಚಿತ್ರೀಕರಣ ಮುಕ್ತಾಯ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ರೂಪೇಶ್ ಶೆಟ್ಟಿ ನಿರ್ದೇಶನದ ಸರ್ಕಸ್ ತುಳು ಸಿನಿಮಾ ಚಿತ್ರೀಕರಣ ಮುಕ್ತಾಯ

Share This
ಮಂಗಳೂರು : ತುಳು ಸಿನಿಮಾರಂಗದ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಸುದ್ದಿಯಾಗಿದ್ದು ತುಳುವಿನಲ್ಲಿ ಸಿನಿಮಾವನ್ನು ನಿರ್ದೇಶಿಸುವ ಮೂಲಕ.
ತುಳು ಸಿನಿಮಾರಂಗದಲ್ಲಿ ಗಿರಿಗಿಟ್ ಸಿನಿಮಾ ಭರ್ಜರಿ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ತುಳು ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟರಾದರು. ಈ ಮಧ್ಯೆ ಕನ್ನಡದಲ್ಲಿ ಗೋವಿಂದಾ ಗೋವಿಂದಾ ಸಹಿತ ಎರಡ್ಮೂರು ಸಿನಿಮಾದಲ್ಲೂ ನಟಿಸಿದ್ದರು. ಕಳೆದ ವರ್ಷ ಲಾಕ್ ಡೌನ್ ಸಂದರ್ಭ ಇದೇ ತಂಡದಿಂದ ತೆರೆಕಂಡ ಗಮ್ಜಾಲ್ ಕೂಡಾ ಪ್ರೇಕ್ಷಕರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿತ್ತು.

ಇದೀಗ ರೂಪೇಶ್ ಶೆಟ್ಟಿ ಸರ್ಕಸ್ ಸಿನಿಮಾ ನಿರ್ಮಾಣದಲ್ಲಿ ಬಿಝಿಯಾಗಿದ್ದಾರೆ. ಈಗಾಗಲೇ ಚಿತ್ರದ ಚಿತ್ತೀಕರಣ ಪೂರೈಸಿ ಮುಂದಿನ ಹಂತದ ಕೆಲಸ ಕಾರ್ಯಕ್ಕೆ ಮುಂದಡಿ ಇಟ್ಟಿದ್ದಾರೆ. ಪ್ರತೀ ಚಿತ್ರದಲ್ಲೂ ಹೊಸತನ ಬಯಸುವ ರೂಪೇಶ್ ಈ ಬಾರಿ ಕೂಡಾ ಒಂದು ಉತ್ತಮ ಕಥೆಯನ್ನು ಆಯ್ಕೆ ಮಾಡಿದ್ದಾರೆ. ಗಿರಿಗಿಟ್, ಗಮ್ಜಾಲ್ ಗೆ ಸಂಭಾಷಣೆ ಬರೆದ ಪ್ರಸಣ್ಣ ಶೆಟ್ಟಿ ಬೈಲೂರು ಈ ಸಿನಿಮಾಕ್ಕೂ ಸಂಭಾಷಣೆ ಬರೆದಿದ್ದಾರೆ.

ರೂಪೇಶ್ ಶೆಟ್ಟಿ ಅವರು ತನ್ನದೇ ಆದ ಒಂದು ತಂಡವನ್ನು ಕಟ್ಟಿ ಕೊಂಡಿದ್ದಾರೆ. ಹೀಗಾಗಿ ಅವರ ಕೆಲಸ ಕಾರ್ಯಗಳು ಅವರು ಎಣಿಸಿದಂತೆ ಬಹು ಸುಲಭ ಆಗುತ್ತಿದೆ. ರೂಪೇಶ್ ಈ ಬಾರಿ ತುಳುವಿಗೊಬ್ಬ ಹೊಸ ಖಳನಟನನ್ನು ತುಳುವಿಗೆ ಪರಿಚಯಿಸುತ್ತಿದ್ದಾರೆ.

ಯಶ್ ಶೆಟ್ಟಿ ಎಂಬವರು ಸಲಗ ಸಿನಿಮಾದ ಮೂಲಕ ಬೆಳ್ಳಿತೆರೆಗೆ ಬಂದವರು. ಯಶ್ ಈಗ ಸರ್ಕಸ್ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಅದೇ ರೀತಿ ರಚನಾ ರೈ ಎಂಬ ನಟಿಯನ್ನು ರೂಪೇಶ್ ತುಳುವಿಗೆ ಪರಿಚಯಿಸುತ್ತಿದ್ದಾರೆ.

'ಗಿರ್‌ಗಿಟ್‌’ ತುಳು ಚಿತ್ರಗಳ ಪೈಕಿ ಅತ್ಯಂತ ಯಶಸ್ವಿಯಾದ ಹಾಸ್ಯಮಯ ಚಿತ್ರ. ಹಲವು ದೇಶಗಳಲ್ಲಿ ಗಿರಿಗಿಟ್ ಬಿಡುಗಡೆ ಗೊಂಡು ಭರ್ಜರಿ ಪ್ರದರ್ಶನ ಕಂಡಿದೆ. ಈಗ ಅದೇ ತಂಡದವರು ‘ಸರ್ಕಸ್‌’ ಆರಂಭಿಸಿದ್ದಾರೆ. ‘ಸರ್ಕಸ್‌’ ಶೀರ್ಷಿಕೆ ಕನ್ನಡದಲ್ಲಿ ಈಗಾಗಲೇ ಯಶಸ್ವಿಯಾದ ಚಿತ್ರದ ಹೆಸರು. ಹಿಂದಿಯಲ್ಲೂ ಮುಂದಿನ ವರ್ಷ ಇದೇ ಹೆಸರಿನ ಚಿತ್ರವೊಂದು ತೆರೆ ಕಾಣಲಿದೆ.

ತುಳು ಚಿತ್ರಗಳ ಸಾಮಾನ್ಯ ಪ್ರಕಾರವೇ ಹಾಸ್ಯ. ‘ಸರ್ಕಸ್‌’ನಲ್ಲೂ ಅದೇ ಪ್ರಧಾನ ವಸ್ತು. ರೂಪೇಶ್‌ ಶೆಟ್ಟಿ ನಿರ್ದೇಶಿಸಿ ಪ್ರಧಾನ ಪಾತ್ರ ನಿರ್ವಹಿಸುತ್ತಿದ್ದಾರೆ. ಇಲ್ಲಿ ರಾಕೇಶ್‌ ಕದ್ರಿ ಕ್ರಿಯೆಟಿವ್ ಹೆಡ್ ಆಗಿ ಕೆಲಸ ಮಾಡುತ್ತಿದ್ದಾರೆ.

ಉಳಿದಂತೆ ತುಳು ಚಿತ್ರರಂಗದ ಘಟಾನುಘಟಿ ಕಲಾವಿದರಾದ ನವೀನ್‌ ಡಿ. ಪಡೀಲ್‌, ಭೋಜರಾಜ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ ಕುಡ್ಲ, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ಚಂದ್ರಹಾಸ ಉಳ್ಳಾಲ್, ನಿತೇಶ್ ಶೆಟ್ಟಿ ಎಕ್ಕಾರ್, ರೂಪಾ ವರ್ಕಾಡಿ, ಪಂಚಮಿ ಭೋಜರಾಜ್, ತಾರಾಗಣದಲ್ಲಿದ್ದಾರೆ.

ಸದ್ಯ ಟಾಕಿ ಭಾಗದ ಚಿತ್ರೀಕರಣ ಮುಗಿದಿದೆ. ಬಳಿಕ ಹಾಡುಗಳ ಚಿತ್ರೀಕರಣ ನಡೆಯಲಿದೆ. ಒಟ್ಟು 25 ದಿನಗಳ ಚಿತ್ರೀಕರಣ ನಡೆಯಲಿದೆ ಎಂದು ಚಿತ್ರತಂಡ ಹೇಳಿದೆ.

ಆರ್ ಎಸ್ ಸಿನಿಮಾ ಮತ್ತು ಶೂಲಿನ್ ಫಿಲ್ಮ್ ಲಾಂಛನದಡಿಯಲ್ಲಿ ಸರ್ಕಸ್ ಸಿನಿಮಾ ತಯಾರಾಗುತ್ತಿದೆ. ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ, ಮಂಜುನಾಥ ಅತ್ತಾವರ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಮಂಗಳೂರು, ಮರವೂರು ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಚಿತ್ತೀಕರಣ ನಡೆದಿದೆ.

ಸಂಭಾಷಣೆ ಪ್ರಸಣ್ಣ ಶೆಟ್ಟಿ ಬೈಲೂರು, ನವೀನ್ ಶೆಟ್ಟಿ ನೃತ್ಯ ನಿರ್ದೇಶನ, ನಿರಂಜನ ದಾಸ್ ಕ್ಯಾಮರಾ, ರಾಹುಲ್ ವಶಿಷ್ಠ ಸಂಕಲನ ಈ ಚಿತ್ರಕ್ಕಿದೆ. ಕೋವಿಡ್ ಪರಿಸ್ಥಿತಿ ತಿಳಿಯಾಗಿ ನಿರ್ಬಂಧಗಳು ಸಡಿಲವಾದ ಬಳಿಕ ಚಿತ್ರ ಬಿಡುಗಡೆ ಮಾಡುತ್ತೇವೆ ಎಂದು ನಟ, ನಿರ್ದೇಶಕ ರೂಪೇಶ್ ಶೆಟ್ಟಿ ತಿಳಿಸಿದ್ದಾರೆ. ಗಿರಿಗಿಟ್ ಬಳಿಕ ರೂಪೇಶ್ ನಿರ್ದೇಶಿಸುತ್ತಿರುವ ಎರಡನೇ ಸಿನಿಮಾ ಇದಾಗಿದೆ.

Pages