ಬಂಟರ ಕ್ರೀಡೋತ್ಸವ: ಸುರತ್ಕಲ್ ಗ್ರಾಮ ಚಾಂಪ್ಯನ್ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟರ ಕ್ರೀಡೋತ್ಸವ: ಸುರತ್ಕಲ್ ಗ್ರಾಮ ಚಾಂಪ್ಯನ್

Share This

ಕ್ರೀಡೆಯ ಮೂಲಕ ಸಮಾಜದ ಸಂಘಟನೆ: ಸುಧಾಕರ ಪೂಂಜ

ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಸುರತ್ಕಲ್ ಗೋವಿಂದ ದಾಸ ಕಾಲೇಜ್ ಮೈದಾನದಲ್ಲಿ ನಡೆದ ಬಂಟರ ಕ್ರೀಡೋತ್ಸವದಲ್ಲಿ ಸುರತ್ಕಲ್ ಗ್ರಾಮ ಅತ್ಯಧಿಕ ಅಂಕ ಗಳಿಸಿ ಸಮಗ್ರ ಚಾಂಪ್ಯನ್ ಪ್ರಶಸ್ತಿ ಪಡೆದುಕೊಂಡಿದೆ. ಕೂಟದಲ್ಲಿ ಚೇಳಾರ್ ಗ್ರಾಮ ದ್ವೀತೀಯ, ಇಡ್ಯಾ ಗ್ರಾಮ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ಪಥ ಸಂಚಲನ ವಿಭಾಗದಲ್ಲಿ ಇಡ್ಯಾ ಗ್ರಾಮ ಪ್ರಥಮ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಧಾಕರ ಎಸ್ ಪೂಂಜ ವಹಿಸಿದ್ದರು. ಸುರತ್ಕಲ್ ಬಂಟರ ಸಂಘವು ಸಾಂಸ್ಕೃತಿಕ, ಸಮಾಜ ಸೇವೆಯ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡುತ್ತಾ ಬಂದಿರುತ್ತದೆ. ಸುರತ್ಕಲ್ ಭಾಗದಲ್ಲಿ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದ ಕ್ರೀಡಾಳುಗಳಿದ್ದಾರೆ. ಕ್ರೀಡಾಳುಗಳನ್ನು ಪ್ರೋತ್ಸಾಹಿಸುವ ಕೆಲಸವೂ ಸಂಘದಿಂದ ನಡೆದಿದೆ. ಕ್ರೀಡೆಯ ಮೂಲಕ ಸಮಾಜವನ್ನು ಸಂಘಟಿಸುವ ಕೆಲಸವೂ ನಡೆಯುತ್ತಿದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಮಾತನಾಡಿ ಜಿಲ್ಲೆಯಲ್ಲಿ ಸುರತ್ಕಲ್ ಬಂಟರ ಸಂಘ ಕ್ರೀಯಾಶೀಲ ಸಂಘವಾಗಿದೆ. ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ ಸಮಾಜದಲ್ಲಿರುವ ಸಂಘಗಳಿಗೆ ಮಾದರಿ ಸಂಘವಾಗಿ ಸುರತ್ಕಲ್ ಬಂಟರ ಸಂಘ ಕೆಲಸ ಮಾಡುತ್ತಿದೆ. ನಿರಂತರ ಚಟುವಟುಕೆಯಲ್ಲಿ ತೊಡಗಿಕೊಂಡಿರುವ ಸುರತ್ಕಲ್ ಬಂಟರ ಸಂಘ ಈ ವರ್ಷ ಬೆಳ್ಳಿಹಬ್ಬದ ಆಚರಣೆಯ ಸಿದ್ದತೆಯಲ್ಲಿದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಸುರತ್ಕಲ್ ಬಂಟರ ಸಂಘ ಕೈಗೊಳ್ಳುವ ಕಾರ್ಯಕ್ರಮಗಳಲ್ಲಿ ಕೈ ಜೋಡಿಸಲಿದೆ ಎಂದರು.

ಸಮಾರಂಭದಲ್ಲಿ ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಯುವ ವಿಭಾಗದ ಅಧ್ಯಕ್ಷ ದೇವಿಚರಣ್ ಶೆಟ್ಟಿ, ಮಹಾನಗರ ಪಾಲಿಕೆಯ ಸದಸ್ಯ ವರುಣ್ ಚೌಟ, ವಿಜಯ ಬ್ಯಾಂಕ್ ನ ನಿವೃತ್ತ ಪ್ರಬಂಧಕ ಎನ್ ಅಶೋಕ್ ಕುಮಾರ್ ಶೆಟ್ಟಿ, ಮುಂಚೂರು ಕೆಳಗಿನ ಮನೆ ಸತೀಶ ಶೆಟ್ಟಿ, ಮಂಗಳೂರು ತಾಲೂಕು ಸಮಿತಿ ಸಂಚಾಲಕ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ ಭಾಗವಹಿಸಿದ್ದರು.

ಸಮಾರಂಭದಲ್ಲಿ ಸಂಘದ ಉಪಾಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ‌ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ಸುರತ್ಕಲ್, ಕೋಶಾಧಿಕಾರಿ ರತ್ನಾಕರ ಶೆಟ್ಟಿ ಸುರತ್ಕಲ್, ಜೊತೆ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಸಂಘಟನಾ ಕಾರ್ಯದರ್ಶಿ ದೇವೇಂದ್ರ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಬಾಳ, ಕ್ರೀಡಾ ಕಾರ್ಯದರ್ಶಿ ಹರೀಶ್ ಕೆ ಶೆಟ್ಟಿ, ಮಹಿಳಾ ವೇದಿಕೆಯ ಅಧ್ಯೆಕ್ಷೆ ಚಿತ್ರಾ ಜೆ ಶೆಟ್ಟಿ, ಮಹಿಳಾ ಕ್ರೀಡಾ ಕಾರ್ಯದರ್ಶಿ ಅಕ್ಷತಾ ಜಿ ಶೆಟ್ಟಿ ಉಪಸ್ಥಿತರಿದ್ದರು. ಲೋಕಯ್ಯ ಶೆಟ್ಟಿ ಸ್ವಾಗತಿಸಿದರು. ಪ್ರವೀಣ್ ಶೆಟ್ಟಿ ವಂದಿಸಿದರು. ರಾಜೇಶ್ವರಿ ಡಿ ಶೆಟ್ಟಿ ಕಾರ್ಯಕ್ರಮ‌ ನಿರ್ವಹಿಸಿದರು.

ಫಲಿತಾಂಶ: ಕ್ರೀಡಾ ಕೂಟದಲ್ಲಿ ವಾಲಿಬಾಲ್ ಪಂದ್ಯಾಟದಲ್ಲಿ ಕೆಂಜಾರ್ ಗ್ರಾಮ ಪ್ರಥಮ, ಸುರತ್ಕಲ್ ಗ್ರಾಮ ದ್ವಿತೀಯ, ಪುರುಷರ ಹಗ್ಗ ಜಗ್ಗಾಟದಲ್ಲಿ ಸುರತ್ಕಲ್ ಪ್ರಥಮ, ಕೆಂಜಾರ್ ದ್ವಿತೀಯ, ಮಹಿಳೆಯರ ಹಗ್ಗ ಜಗ್ಗಾಟದಲ್ಲಿ ಇಡ್ಯಾ ಪ್ರಥಮ, ಸುರತ್ಕಲ್ ದ್ವಿತೀಯ, ಮಹಿಳೆಯರ ತ್ರೋಬಾಲ್ ಪಂದ್ಯಾಟದಲ್ಲಿ ಕಾಟಿಪಳ್ಳ ಪ್ರಥಮ, ಇಡ್ಯಾ ದ್ವಿತೀಯ ಪ್ರಶಸ್ತಿ ಗಳಿಸಿತ್ತು.

Pages