ಜಾಗತಿಕ ಬಂಟರ ಸಂಘದ ಒಕ್ಕೂಟದ ಸಹಕಾರದಲ್ಲಿ ನಿರ್ಮಾಣವಾದ 3 ಮನೆ ಹಸ್ತಾಂತರ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಜಾಗತಿಕ ಬಂಟರ ಸಂಘದ ಒಕ್ಕೂಟದ ಸಹಕಾರದಲ್ಲಿ ನಿರ್ಮಾಣವಾದ 3 ಮನೆ ಹಸ್ತಾಂತರ

Share This
ಮಂಗಳೂರು :ಜಾಗತಿಕ ಬಂಟರ ಸಂಘದ ಸಹಕಾರದಲ್ಲಿ ಮೂಲ್ಕಿ ತಾಲೂಕಿನ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ನಡುಗೋಡು‌ ಕಜೆಮಾರು ನಿವಾಸಿ ರಂಜಿತ್ ಶೆಟ್ಟಿ ಅವರಿಗೆ ಮನೆ ನಿರ್ಮಾಣ ಮಾಡಲಾಗಿದ್ದು, ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಭೇಟಿ ನೀಡಿ ಮನೆ ಹಸ್ತಾಂತರಿಸಿದರು, ಈ ಸಂದರ್ಭ ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಪುರುಶೋತ್ತಮ ಶೆಟ್ಟಿ, ಕಟೀಲು ಪಂಚಾಯತ್ ಮಾಜಿ ಸದಸ್ಯ ತಿಲಕ್ ರಾಜ್ ಶೆಟ್ಟಿ, ರಂಜಿತ್ ಶೆಟ್ಟಿ, ರವೀಂದ್ರ ಶೆಟ್ಟಿ, ಸ್ಮೀತಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಮುಲ್ಕಿ ಬಂಟರ ಸಂಘದ ವ್ಯಾಪ್ತಿಯ ಮುಂಡ್ಕೂರು ಗ್ರಾಮದ ಸಂಕಲಕರಿಯ ಗೋಕುಲನಗರ ಲೀಲಾ ಶೆಟ್ಟಿಯವರ ಮನೆಯ ನಿರ್ಮಾಣವಾಗುತ್ತಿದ್ದು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಗುರುವಾರ ವೀಕ್ಷಣೆ ನಡೆಸಿದರು. ಈ ಸಂದರ್ಭದಲ್ಲಿ ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯ ಶರತ್ ಶೆಟ್ಟಿ, ಮುಂಡ್ಕೂರು ಗ್ರಾಮ ಪಂಚಾಯತ್ ಸದಸ್ಯ ಅಶೋಕ ಶೆಟ್ಟಿ ಇದ್ದರು.

ಮುಲ್ಕಿ ಬಂಟರ ಸಂಘದ ವ್ಯಾಪ್ತಿಯ ಮುಂಡ್ಕೂರು ಗ್ರಾಮದ ಸಂಕಲಕರಿಯ ಗೋಕುಲನಗರ ಉಷಾ ಶೆಟ್ಟಿಯವರ ಮನೆಯನ್ನು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಗುರುವಾರ ಹಸ್ತಾಂತರಿಸಿದರು.

ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯ ಶರತ್ ಶೆಟ್ಟಿ, ಮುಂಡ್ಕೂರು ಗ್ರಾಮ ಪಂಚಾಯತ್ ಸದಸ್ಯ ಅಶೋಕ ಶೆಟ್ಟಿ ಇದ್ದರು.

Pages