ಫೆ.20 : ಬಂಟರ ಸಂಘ ಸುರತ್ಕಲ್ ವತಿಯಿಂದ ಕೃಷಿಕರಿಗೆ ಮಾಹಿತಿ ಶಿಬಿರ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಫೆ.20 : ಬಂಟರ ಸಂಘ ಸುರತ್ಕಲ್ ವತಿಯಿಂದ ಕೃಷಿಕರಿಗೆ ಮಾಹಿತಿ ಶಿಬಿರ

Share This
ಸುರತ್ಕಲ್: ಬಂಟರ ಸಂಘ ( ರಿ ) ಸುರತ್ಕಲ್ ಇದರ ವತಿಯಿಂದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ ಹಾಗೂ ಹೈನುಗಾರಿಕೆ ಇಲಾಖೆಯ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಕೃಷಿಕರಿಗೆ ದೊರಕುವ ವಿವಿಧ ಯೋಜನೆ ಮತ್ತು ಸವಲತ್ತುಗಳ ಬಗ್ಗೆ ಮಾಹಿತಿ ಶಿಬಿರ ಫೆಬ್ರವರಿ 20ರಂದು ಭಾನುವಾರ ಸಂಜೆ 4 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.
ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಹಿತಿ ಶಿಬಿರವನ್ನು ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕರಾದ ಉಮಾನಾಥ ಎ. ಕೋಟ್ಯಾನ್ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಅಶೋಕ ಶೆಟ್ಟಿ ಸುರತ್ಕಲ್, ಎಕ್ಕಾರ್ ರೈತ ಸಂಘದ ಅಧ್ಯಕ್ಷ ಸದಾಶಿವ ಶೆಟ್ಟಿ ಎಕ್ಕಾರ್ ಭಾಗವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿಗಳಾಗಿ ಅಬ್ದುಲ್ ಬಸೀರ್ (ಕೃಷಿ ಅಧಿಕಾರಿ ಸುರತ್ಕಲ್) ಯೂಗೇಂದ್ರ ( ಸಹಾಯಕ ತೋಟಗಾರಿಕ ಅಧಿಕಾರಿ ಸುರತ್ಕಲ್), ಡಾ| ಸುರೇಶ್ (ಸಹಾಯಕ ನಿರ್ದೇಶಕರು ಪಶುಇಲಾಖೆ ಸುರತ್ಕಲ್) ಇವರು ಭಾಗವಹಿಸಲಿದ್ದಾರೆ.

ಶಿಬಿರದಲ್ಲಿ ಕೃಷಿ, ತೋಟಗಾರಿಕೆ, ಹೈನುಗಾರಿಕೆ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಲಾಗುವುದು. ಕೃಷಿಕರು ಕಾರ್ಯಕ್ರಮಕ್ಕೆ ಆಗಮಿಸಿ ಮಾಹಿತಿ ಶಿಬಿರದ ಪ್ರಯೋಜನವನ್ನು ಪಡೆಯಬೇಕೆಂದು ಕೃಷಿ ಸಮಿತಿಯ ಸಂಚಾಲಕ ಪುಷ್ಪರಾಜ ಶೆಟ್ಟಿ ಮದ್ಯ ತಿಳಿಸಿದ್ದಾರೆ.

Pages