ಮಂಗಳೂರು : ಜಾಗತಿಕ ಬಂಟ ಪ್ರತಿಷ್ಠಾನ (ರಿ) ಇದರ 25ನೇ ಮಹಾಸಭೆ ಮಂಗಳೂರಿನ ಮೋತಿಮಹಲ್ ಹೋಟೆಲ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯ, ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಅವರನ್ನು ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಸನ್ಮಾನಿಸಲಾಯಿತು. ಜಾಗತಿಕ ಬಂಟ ಪ್ರತಿಷ್ಠಾನದ ಅಧ್ಯಕ್ಷ ಎ.ಜೆ. ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ ಶೆಟ್ಟಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಸಿಎ ಸುಧೀರ್ ಕುಮಾರ್ ಶೆಟ್ಟಿ, ಉಪಾಧ್ಯಕ್ಚ ಕುಶಾಲ್ ಎಸ್ ಹೆಗ್ಡೆ ಪುಣೆ, ಕೋಶಾಧಿಕಾರಿ ಸಿಎ ಪಿ ರಘುಚಂದ್ರ ಶೆಟ್ಟಿ, ಸಂಜೀವ ರೈ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಜ್ ಕಿರಣ್ ರೈ ಮೊದಲಾದವರು ಉಪಸ್ಥಿತರಿದ್ದರು.