ಬಂಟರ ಸಂಘ ಮುಂಬೈ : ನೂತನ ವಿಶ್ವಸ್ಥರಾಗಿ ಸದಾಶಿವ ಶೆಟ್ಟಿ ಕನ್ಯಾನ ಆಯ್ಕೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟರ ಸಂಘ ಮುಂಬೈ : ನೂತನ ವಿಶ್ವಸ್ಥರಾಗಿ ಸದಾಶಿವ ಶೆಟ್ಟಿ ಕನ್ಯಾನ ಆಯ್ಕೆ

Share This
ಬಂಟ್ಸ್ ನ್ಯೂಸ್, ಮುಂಬೈ: ನಗರದ ಪ್ರತಿಷ್ಠಿತ ಜಾತಿಯ ಸಂಸ್ಥೆಗಳ ಒಂದಾಗಿರುವ ಬಂಟರ ಸಂಘ ಮುಂಬಯಿಯ ನೂತನವಾಗಿ ವಿಶ್ವಸ್ಥರಾಗಿ ಹೇರಂಬ ಇಂಡಸ್ಟ್ರೀಸ್ ಲಿಮಿಟೆಡ್'ನ ಕಾರ್ಯಾಧ್ಯಕ್ಷ ಕನ್ಯಾನ ಕೂಳೂರು ಸದಾಶಿವ ಶೆಟ್ಟಿ ಆಯ್ಕೆಗೊಂಡಿದ್ದಾರೆ.
ಇತ್ತೀಚೆಗೆ ನಡೆದ ಸಂಘದ ವಿಶ್ವಸ್ಥರು ಮತ್ತು ಮಾಜಿ ಅಧ್ಯಕ್ಷರು ಸಭೆಯಲ್ಲಿ ನೂತನವಾಗಿ ವಿಶ್ವಸ್ಥರಾಗಿ ಆಯ್ಕೆಗೊಂಡಿರುವ ಸದಾಶಿವ ಶೆಟ್ಟಿ ಅವರನ್ನು ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಹೂಗುಚ್ಛ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಉಳ್ತೂರು ಮೋಹನ್ದಾಸ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ. ಆರ್ ಕೆ ಶೆಟ್ಟಿ, ಕೋಶಾಧಿಕಾರಿ ಸಿ ಎ ಹರೀಶ್ ಶೆಟ್ಟಿ, ಮಾಜಿ ಅಧ್ಯಕ್ಷರುಗಳಾದ ಬಿ ವಿವೇಕ್ ಶೆಟ್ಟಿ, ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಭಾಕರ್ ಎಲ್ ಶೆಟ್ಟಿ, ಪದ್ಮನಾಭ ಎಸ್ ಪಯಾಡೆ, ವಿಶ್ವಸ್ಥರಾದ ಡಾ| ವಿರಾರ್ ಶಂಕರ್ ಶೆಟ್ಟಿ, ಬೋರಿವಲಿ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಡಾಕ್ಟರ್ ಪಿ ವಿ ಶೆಟ್ಟಿ, ಉನ್ನತ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಸಿಎ ಐ ಆರ್ ಶೆಟ್ಟಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಶಾಂತರಾಮ ಬಿ ಶೆಟ್ಟಿ, ಪವಯೈ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಬಿ ಆರ್ ಶೆಟ್ಟಿ ಮತ್ತು ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಉಮಾ ಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

Pages