ಮಂಗಳೂರು: ಸಹಕಾರ ಸಂಘಗಳ ಕ್ಷೇತ್ರದ ಧುರೀಣ ಸಹಕಾರ ರತ್ನ ಡಾ| ಎಂ. ಎನ್ ರಾಜೇಂದ್ರ ಕುಮಾರ್ ಅವರ ಹುಟ್ಟು ಹಬ್ಬದ ವಿಶೇಷ ಕಾರ್ಯಕ್ರಮ ಮಂಗಳೂರಿನ ಎಸ್ಸಿ ಡಿಸಿಸಿ ಬ್ಯಾಂಕಿನ ಆವರಣದಲ್ಲಿ ನಡೆದ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ಭಾಗವಹಿಸಿ ಡಾ. ಎಂ ಎನ್ ರಾಜೇಂದ್ರ ಕುಮಾರ್ ಅವರನ್ನು ಸನ್ಮಾನಿಸಿದರು.
ಈ ಸಂದರ್ಭ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಡಾ. ದೇವಿಪ್ರಸಾದ್ ಶೆಟ್ಟಿ, ಉಡುಪಿಯ ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಅಧ್ಯಕ್ಷರಾದ ನಾಡೋಜ ಡಾಕ್ಟರ್ ಜಿ ಶಂಕರ್, ಮೀನುಗಾರಿಕಾ ಮಹಾಮಂಡಲದ ಅಧ್ಯಕ್ಷ ಯಶ್ಪಲ್ ಸುವರ್ಣ, ಖ್ಯಾತ ಪತ್ರಕರ್ತ ಮನೋಹರ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.