ಸಿದ್ಧಕಟ್ಟೆ ಬಂಟರ ಸಂಘದ ಅಧ್ಯಕ್ಷರಾಗಿ ಸಂದೇಶ ಶೆಟ್ಟಿ ಪೊಡುಂಬ ಆಯ್ಕೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಸಿದ್ಧಕಟ್ಟೆ ಬಂಟರ ಸಂಘದ ಅಧ್ಯಕ್ಷರಾಗಿ ಸಂದೇಶ ಶೆಟ್ಟಿ ಪೊಡುಂಬ ಆಯ್ಕೆ

Share This
ಬಂಟ್ಸ್ ನ್ಯೂಸ್, ಬಂಟ್ವಾಳ : ಬಂಟರ ಸಂಘ ಬಂಟ್ವಾಳ ತಾಲೂಕು ಇದರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಸಿದ್ಧಕಟ್ಟೆ ವಲಯ ಬಂಟರ ಸಂಘದ ವಾರ್ಷಿಕ ಮಹಾಸಭೆ ಮಾ. 13ರ ಆದಿತ್ಯವಾರ ಸಂಜೆ ಸಿದ್ಧಕಟ್ಟೆ ಅಕ್ಷಯ ಸಭಾಭವನದಲ್ಲಿ ನಡೆಯಿತು.
ತಾಲೂಕು ಬಂಟರ ಸಂಘದ ಮೇಲುಸ್ತುವಾರಿ ಯಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ವಲಯ ಬಂಟರ ಸಂಘದ ಅಧ್ಯಕ್ಷ ಶ್ರೀಧರ್ ಶೆಟ್ಟಿ ವಹಿಸಿದ್ದರು. ಸಭೆಯಲ್ಲಿ ಸಿದ್ಧಕಟ್ಟೆ ವಲಯ ಬಂಟರ ಸಂಘದ ಕಾರ್ಯಕಾರಿ ಸಮಿತಿಯನ್ನು ಪುನರ್ ರಚಿಸಲಾಯಿತು. ಒಟ್ಟು 31 ಸದಸ್ಯರನ್ನು ಕಾರ್ಯಕಾರಿ ಸಮಿತಿಗೆ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಸಂದೇಶ ಶೆಟ್ಟಿ ಪೊಡುಂಬ, ಕಾರ್ಯದರ್ಶಿಯಾಗಿ ರತಿಶ್ ಶೆಟ್ಟಿ ಕೊನೆರಬೆಟ್ಟು, ಉಪಾಧ್ಯಕ್ಷರಾಗಿ ರಾಜೇಶ್ ಶೆಟ್ಟಿ ಕೊನೆರಬೆಟ್ಟು ಕೋಶಾಧಿಕಾರಿಯಾಗಿ ಯಶೋಧಾ ಶೆಟ್ಟಿ ಬದ್ಯಾರು, ಜೊತೆ ಕಾರ್ಯದರ್ಶಿಯಾಗಿ ಸುಧೀಂದ್ರ ಶೆಟ್ಟಿ ಕಲಾಯಿದಡ್ದ, ಸಂಘಟನಾ ಕಾರ್ಯದರ್ಶಿಯಾಗಿ ಹರಿಪ್ರಸಾದ್ ಶೆಟ್ಟಿ ಕುರುಡಾಡಿ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ನೂತನ ಗೌರವ ಅಧ್ಯಕ್ಷ ಟರಾಗಿ ರತ್ನ ಕುಮಾರ್ ಚೌಟ ಮತ್ತು ಶ್ರೀಧರ ಶೆಟ್ಟಿ ಇವರನ್ನು ಆಯ್ಕೆ ಮಾಡಲಾಯಿತು. ತಾಲೂಕು ಯುವ ಬಂಟ ವಿಭಾಗಕ್ಕೆ ಪ್ರತಿನಿಧಿಗಳಾಗಿ ಅಶ್ವತ್ ಶೆಟ್ಟಿ ಕೊನೆರಬೆಟ್ಟು, ರಂಜಿತ್ ಶೆಟ್ಟಿ ಬದ್ಯಾರ್, ಶಮಂತ ಶೆಟ್ಟಿ ಸಿದ್ಧಕಟ್ಟೆ ಮತ್ತು ನಾಗರಾಜ್ ಶೆಟ್ಟಿ ಅಸಾಯಿ ಇವರನ್ನು ಆಯ್ಕೆ ಮಾಡಲಾಯಿತು. 

ತಾಲೂಕು ಬಂಟರ ಸಂಘಕ್ಕೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಶ್ರೀಧರ್ ಶೆಟ್ಟಿ, ಸಂದೇಶ ಶೆಟ್ಟಿ, ಸುರೇಶ್ ಶೆಟ್ಟಿ ಮತ್ತು ಗಣೇಶ್ ಶೆಟ್ಟಿ ಇವರನ್ನು ಅಭಿನಂದಿಸಲಾಯಿತು. ತಾಲೂಕು ಮಹಿಳಾ ವಿಭಾಗದ ಜೊತೆ ಕಾರ್ಯದರ್ಶಿ ಮಂದಾರತಿ ಶೆಟ್ಟಿ, ಅಶ್ವಿನಿ ಶೆಟ್ಟಿ, ಅರುಣಾ ಶೆಟ್ಟಿ ಮತ್ತು ಪ್ರತಿಭಾ ಶೆಟ್ಟಿ ಇವರನ್ನು ಅಭಿನಂದಿಸಲಾಯಿತು. 

ತಾಲೂಕು ಬಂಟರ ಸಂಘದ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ ಮಾತನಾಡಿ ವಲಯ ಬಂಟರ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರ ಹೊಣೆಗಾರಿಕೆಯನ್ನು ಮನವರಿಕೆ ಮಾಡಿದರು. ಅಧ್ಯಕ್ಷರಾದ ಶ್ರೀಧರ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಸಹಕರಿಸಿದ ಎಲ್ಲರಿಗೂ ಅಭಿವಂದಿಸಿದರು. ನೂತನ ಅಧ್ಯಕ್ಷ ಸಂದೇಶ ಶೆಟ್ಟಿ ಮಾತನಾಡಿ ಎಲ್ಲರ ಸಹಕಾರ ಕೋರಿದರು. ಸಂಘಕ್ಕೆ ಸ್ವಂತ ನಿವೇಶನದ ಇರಾದೆಯನ್ನು ವ್ಯಕ್ತಪಡಿಸಿದರು. 

ರತ್ನ ಕುಮಾರ ಚೌಟ ಶುಭ ಹಾರೈಸಿದರು. ಗಣೇಶ್ ಶೆಟ್ಟಿ ವರದಿ ವಾಚಿಸಿದರು.ಸುರೇಶ್ ಶೆಟ್ಟಿ ಧನ್ಯವಾದ ವಿತ್ತರು.ಕುಮಾರಿ ಭೂಮಿಕಾ ಪ್ರಾರ್ಥಿಸಿದರು.

Pages