ಮಾ.20: ಸುರತ್ಕಲ್ ನಲ್ಲಿ ರಕ್ತದಾನ ಶಿಬಿರ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಮಾ.20: ಸುರತ್ಕಲ್ ನಲ್ಲಿ ರಕ್ತದಾನ ಶಿಬಿರ

Share This
ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಲಯನ್ಸ್ ಕ್ಲಬ್ ಹಳೆಯಂಗಡಿ, ಜೆಸಿಐ ಸುರತ್ಕಲ್ ಮತ್ತು ಕೆಎಂಸಿ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮಾಚ್೯ 20 ಭಾನುವಾರ ಬೆಳಿಗ್ಗೆ 9 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.
ಅಧ್ಯಕ್ಷತೆಯನ್ನು ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್ ಪೂಂಜ ವಹಿಸಲಿದ್ದಾರೆ. ರಕ್ತದಾನ ಶಿಬಿರವನ್ನು ಸುರತ್ಕಲ್ ಶೆಟ್ಟೀಸ್ ಕ್ಲಿನಿಕ್'ನ ಡಾ. ಟಿ.ಆರ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಹಳೆಯಂಗಡಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಸುರತ್ಕಲ್ ಜೆಸಿಐ ಅಧ್ಯಕ್ಷೆ ರಾಜೇಶ್ವರಿ ಡಿ ಶೆಟ್ಟಿ, ನಾಗೇಶ್ ಕುಮಾರ್ ಎನ್ ಜೆ ಉಪಸ್ಥಿತರಿರಲಿದ್ದಾರೆ ಎಂದು ವೈದ್ಯಕೀಯ ಸಮಿತಿಯ ಸಂಚಾಲಕ ಪ್ರತಾಪ್ ಶೆಟ್ಟಿ ತಿಳಿಸಿದ್ದಾರೆ.

Pages