ರಕ್ತದಾನ ಶ್ರೇಷ್ಠದಾನ, ಯುವಜನತೆ ತಿಳುವಳಿಕೆ ಬೆಳೆಸಿಕೊಳ್ಳಬೇಕು : ಡಾ. ಟಿ. ಆರ್. ಶೆಟ್ಟಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ರಕ್ತದಾನ ಶ್ರೇಷ್ಠದಾನ, ಯುವಜನತೆ ತಿಳುವಳಿಕೆ ಬೆಳೆಸಿಕೊಳ್ಳಬೇಕು : ಡಾ. ಟಿ. ಆರ್. ಶೆಟ್ಟಿ

Share This

ಸುರತ್ಕಲ್ ಬಂಟರ ಸಂಘದಿಂದ ರಕ್ತದಾನ ಶಿಬಿರ

ಬಂಟ್ಸ್ ನ್ಯೂಸ್, ಸುರತ್ಕಲ್: ಬಂಟರ ಸಂಘ (ರಿ.) ಸುರತ್ಕಲ್, ಲಯನ್ಸ್ ಕ್ಲಬ್ ಹಳೆಯಂಗಡಿ, ಜೆಸಿಐ ಸುರತ್ಕಲ್ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಆಶ್ರಯದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮವು ಆದಿತ್ಯವಾರ ಸುರತ್ಕಲ್ ಬಂಟರ ಭವನದಲ್ಲಿ ನೆರವೇರಿತು.
ಉದ್ಘಾಟನೆಯನ್ನು ಸುರತ್ಕಲ್ ನ ಹಿರಿಯ ವೈದ್ಯರಾದ ಡಾ.ಟಿ. ಆರ್. ಶೆಟ್ಟಿ ನೆರವೇರಿಸಿದರು. ಬಳಿಕ ಮಾತಾಡಿದ ಅವರು, ಉದಕ ದಾನ, ಅನ್ನದಾನ, ಗೋ ದಾನ, ಭೂದಾನ ದಂತೆಯೇ ರಕ್ತದಾನ ಕೂಡಾ ಮಹಾದಾನವಾಗಿದ್ದು ಜನರಲ್ಲಿ ರಕ್ತದಾನದ ಕುರಿತು ಹೆಚ್ಚಿನ ತಿಳುವಳಿಕೆ ಮೂಡಿಸಬೇಕಿದೆ ಎಂದರು. 

ರಕ್ತದಾನ ಇನ್ನೊಬ್ಬರ ಜೀವ ಉಳಿಸುತ್ತದೆ. 18 ವರ್ಷದಿಂದ 60 ವರ್ಷದೊಳಗಿನ ಪ್ರತಿಯೊಬ್ಬ ವ್ಯಕ್ತಿಯೂ 3 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ರಕ್ತದಾನದಿಂದ ಆತ್ಮತೃಪ್ತಿ ಸಿಗುತ್ತದೆ. ರಕ್ತದಾನದಿಂದ ಅರೋಗ್ಯ ವೃದ್ಧಿಸುತ್ತದೆ. ಮಾನಸಿಕ, ಭಾವನಾತ್ಮಕ ಆರೋಗ್ಯಕ್ಕೆ ಪೂರಕವಾಗಿರುತ್ತದೆ. ಆದ್ದರಿಂದ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಬೇಕು ಎಂದು ಕರೆ ನೀಡಿದರು.
ಲಯನ್ ನಾಗೇಶ್ ಕುಮಾರ್ ಎನ್. ಜೆ., ಜೆ ಎಫ್ ಎಂ ರಾಜೇಶ್ವರಿ ಡಿ. ಶೆಟ್ಟಿ, ಕೆಎಂಸಿ ಆಸ್ಪತ್ರೆಯ ಡಾ. ಕೇಸಿಯಾ, ಹಳೆಯಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಅರುಣ್ ಕುಮಾರ್ ಶೆಟ್ಟಿ, ಬಂಟರ ಸಂಘ ಸುರತ್ಕಲ್ ಇದರ ಅಧ್ಯಕ್ಷ ಸುಧಾಕರ ಎಸ್. ಪೂಂಜಾ, ಪ್ರತಾಪ್ ಶೆಟ್ಟಿ ಉಲ್ಲಾಸ್ ಶೆಟ್ಟಿ, ಕೋಶಾಧಿಕಾರಿ ರತ್ನಾಕರ್ ಶೆಟ್ಟಿ, ಮಹಿಳಾ ವೇದಿಕೆಯ ಅಧ್ಯೆಕ್ಷೆ ಚಿತ್ರಾ ಜೆ. ಶೆಟ್ಟಿ, ವಿಜಯ ಮೆಡಿಕಲ್ ಎಂ. ಡಿ. ದಯಾನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ದೀಕ್ಷಾ ಶೆಟ್ಟಿ ಪ್ರಾರ್ಥನೆಗೈದರು. ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ರಾಜೇಶ್ವರಿ ಡಿ. ಶೆಟ್ಟಿ ಧನ್ಯವಾದ ಸಮರ್ಪಿಸಿದರು. ಉಪಾಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಕಾರ್ಯಕ್ರಮ ನಿರ್ವಹಿಸಿದರು

Pages